ಕಾಬೂಲ್: ತಾಲಿಬಾನ್ (Taliban) ಸರ್ಕಾರ ಅಫ್ಘಾನಿಸ್ತಾನದಲ್ಲಿ (Afghanistan) ಮಹಿಳೆಯರ (Women) ವಿಶ್ವವಿದ್ಯಾಲಯ (University) ಶಿಕ್ಷಣವನ್ನು ನಿಷೇಧಿಸಿದ್ದು, ಜಾಗತಿಕವಾಗಿ ಟೀಕೆಗಳಿಗೆ ಗುರಿಯಾಗಿದೆ. ಇದೀಗ ತಾಲಿಬಾನ್ ಸರ್ಕಾರದ ಉನ್ನತ ಶಿಕ್ಷಣ ಸಚಿವರು ಮಹಿಳೆಯರನ್ನು ಶಿಕ್ಷಣದಿಂದ ದೂರವಿಡುವ ನಿರ್ಧಾರಕ್ಕೆ ಸಮರ್ಥನೆ ನೀಡಿದ್ದಾರೆ.
ಮಹಿಳೆಯರ ಶಿಕ್ಷಣವನ್ನು ನಿಷೇಧಿಸುವ ವಿಚಾರದ ಬಗ್ಗೆ ಮೊದಲ ಬಾರಿ ಸಾರ್ವಜನಿಕವಾಗಿ ಮಾತನಾಡಿರುವ ತಾಲಿಬಾನ್ ಸಚಿವ ಮೊದಮ್ಮದ್ ನದೀಮ್, ವಿಶ್ವವಿದ್ಯಾಲಯಗಳಲ್ಲಿ ಹುಡುಗರು ಹಾಗೂ ಹುಡುಗಿಯರು ಜೊತೆಯಾಗಿ ಓದುವುದನ್ನು ತಪ್ಪಿಸುವ ಸಲುವಾಗಿ ಮಹಿಳೆಯರಿಗೆ ವಿಶ್ವವಿದ್ಯಾಲಯಗಳ ಶಿಕ್ಷಣವನ್ನು ನಿಷೇಧಿಸಲಾಗಿದೆ. ವಿಶ್ವವಿದ್ಯಾಲಯಗಳ ಕೆಲವು ವಿಚಾರಗಳು ಇಸ್ಲಾಂನ ತತ್ವಗಳನ್ನು ಉಲ್ಲಂಘಿಸುತ್ತವೆ. ಮುಂದಿನ ಸೂಚನೆ ಬರುವವರೆಗೂ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.
Advertisement
Advertisement
ಹುಡುಗಿಯರು ವಿಶ್ವವಿದ್ಯಾಲಯಕ್ಕೆ ಹೋಗುವ ಸಂದರ್ಭ ಮದುವೆಗೆ ಹೋಗುವವರಂತೆ ಉಡುಪುಗಳನ್ನು ಧರಿಸಿಕೊಂಡು ಹೋಗುತ್ತಿದ್ದಾರೆ. ಅವರು ಕಟ್ಟುನಿಟ್ಟಾಗಿ ಹಿಜಬ್ ಧರಿಸುವ ಸೂಚನೆಯನ್ನೂ ಕಡೆಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ
Advertisement
ವಿಶ್ವವಿದ್ಯಾಲಯಗಳ ಕೆಲವು ವಿಜ್ಞಾನ ವಿಷಯಗಳು ಮಹಿಳೆಯರ ಓದಿಗೆ ಸೂಕ್ತವಾಗಿಲ್ಲ. ಎಂಜಿನಿಯರಿಂಗ್, ಕೃಷಿ ಹಾಗೂ ಇತರ ಕೆಲವು ಕೋರ್ಸ್‌ಗಳು ವಿದ್ಯಾರ್ಥಿನಿಯರ ಘನತೆ, ಗೌರವ ಹಾಗೂ ಅಫ್ಘಾನ್ ಸಂಸ್ಕೃತಿಗೆ ಹೊಂದಿಕೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
Advertisement
ತಾಲಿಬಾನ್‌ನ ನಿರ್ಧಾರವನ್ನು ಮುಸ್ಲಿಂ ಬಹುಸಂಖ್ಯಾತ ಸೌದಿ ಅರೇಬಿಯಾ, ಟರ್ಕಿ, ಕತಾರ್ ಸೇರಿದಂತೆ ಹಲವು ದೇಶಗಳಲ್ಲಿನ ಜನರು ವ್ಯಾಪಕವಾಗಿ ಖಂಡಿಸಿದ್ದಾರೆ. ಆದರೆ ಅಫ್ಘಾನಿಸ್ತಾನದ ಆಂತರಿಕ ವ್ಯವಹಾರಗಳಲ್ಲಿ ವಿದೇಶಿಗರು ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ನದೀಮ್ ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್ ಜೊತೆಗಿನ ಯುದ್ಧವನ್ನು ಶೀಘ್ರವೇ ನಿಲ್ಲಿಸುತ್ತೇವೆ: ಪುಟಿನ್
ಸದ್ಯ ಮಹಿಳೆಯರಿಗೆ ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಈ ನಿರ್ಧಾರವನ್ನು ಪರಿಶೀಲಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.