ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ `ಐಐಟಿ ಬಾಬಾ’ ಎಂದು ಕರೆಯಿಸಿಕೊಳ್ಳುವ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದ್ದಾರೆ.
ಕಳೆದ 2 ದಿನಗಳಿಂದ ಪ್ರಯಾಗ್‌ರಾಜ್‌ದಲ್ಲಿ (Prayag Raj) ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ದೇಶ-ವಿದೇಶಗಳಿಂದ ಕೋಟ್ಯಂತರ ಜನರು ಭೇಟಿ ನೀಡುತ್ತಿದ್ದಾರೆ. ಅಂತೆಯೇ ಹರಿಯಾಣ ಮೂಲದ ಅಭಯ್ ಸಿಂಗ್ ಎಂಬುವವರು, ಬಾಂಬೆಯ ಐಐಟಿಯಲ್ಲಿ ಏರೋಸ್ಪೇಸ್ ಎಂಜಿನಿಯರ್ ಪದವಿ ಪಡೆದಿದ್ದು, ಇದೀಗ ಕುಂಭಮೇಳದಲ್ಲಿ ಸಾಧು ಆಗಿ ಕಾಣಿಸಿಕೊಂಡಿದ್ದಾರೆ.ಇದನ್ನೂ ಓದಿ: ಜುಕರ್‌ಬರ್ಗ್ ಹೇಳಿಕೆಗೆ ಕ್ಷಮೆ ಕೇಳಿದ ಮೆಟಾ – ಈ ವಿಚಾರ ಇಲ್ಲಿಗೆ ಮುಕ್ತಾಯ: ನಿಶಿಕಾಂತ್ ದುಬೆ
Advertisement
Advertisement
ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅವರು, ತಮ್ಮನ್ನು ತಾವು `ಐಐಟಿ ಬಾಬಾ’ ಎಂದು ಹೇಳಿಕೊಳ್ಳುವ ಮೂಲಕ ಸುದ್ದಿಯಾಗಿದ್ದರು. ಸಂದರ್ಶನದಲ್ಲಿ ಇಂಗ್ಲೀಷ್‌ನಲ್ಲಿ ಮಾತನಾಡುತ್ತಿರುವಾಗ ಬಾಂಬೆಯ ಐಐಟಿಯಲ್ಲಿ ಎಂಜಿನಿಯರ್ ಪದವಿ ಪಡೆದಿರುವುದಾಗಿ ಹೇಳಿಕೊಂಡಿದ್ದರು.
Advertisement
ಸಂದರ್ಶನದಲ್ಲಿ ಮಾತನಾಡಿದ ಅವರು, 2014ರಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಬಾಂಬೆಯಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿದ್ದೇನೆ. ಫೋಟೋಗ್ರಫಿಯಲ್ಲಿ ಆಸಕ್ತಿ ಹೊಂದಿದ್ದರಿಂದ ಎಂಜಿನಿಯರಿಂಗ್ ತೊರೆದು 4 ವರ್ಷಗಳ ಕಾಲ ಮುಂಬೈನಲ್ಲಿ ಫೋಟೋಗ್ರಫಿ ಶುರುಮಾಡಿದೆ. ಟ್ರಾವೆಲ್ ಫೋಟೋಗ್ರಫಿಯಲ್ಲಿ ವೃತ್ತಿಪರ ಕೋರ್ಸ್ ಮಾಡುತ್ತಾ ಮುಂದೆ ಕೋಚಿಂಗ್ ಸೆಂಟರ್ ತೆಗೆದು ಮಕ್ಕಳಿಗೆ ಭೌತಶಾಸ್ರ್ರ ಪಾಠ ಮಾಡುವಲ್ಲಿ ತೊಡಗಿಕೊಂಡೆ. ಪಾಠ ಮಾಡುತ್ತಾ ಆಸಕ್ತಿ ಆಧ್ಯಾತ್ಮಿಕತೆಯ ಕಡೆಗೆ ತಿರುಗಿತು. ಬಳಿಕ ತನ್ನ ಜೀವನವನ್ನು ಆಧ್ಯಾತ್ಮಿಕತೆಗೆ ಮುಡಿಪಾಗಿಟ್ಟೆ ಎಂದು ಹೇಳಿಕೊಂಡಿದ್ದಾರೆ.
Advertisement
ಇದೀಗ ಶಿವನ ಭಕ್ತನಾಗಿ ಆಧ್ಯಾತ್ಮಿಕತೆಯನ್ನು ಆನಂದಿಸುತ್ತಿದ್ದೇನೆ. ವಿಜ್ಞಾನದ ಆಳಕ್ಕಿಳಿದು ಆಧ್ಯಾತ್ಮಿಕತೆಯನ್ನು ಅರ್ಥಮಾಡಿಕೊಳ್ಳುತ್ತೇನೆ. ಇಲ್ಲಿ ಎಲ್ಲವೂ ಶಿವನೇ, ಸತ್ಯವೇ ಶಿವ ಹಾಗೂ ಶಿವನೇ ಸುಂದರವಾಗಿದ್ದಾನೆ. ಈ ಕುಂಭಮೇಳದಲ್ಲಿ ಭಾಗಿಯಾಗಿರುವುದು ನನ್ನ ಮನಸ್ಸಿಗೆ ನೆಮ್ಮದಿ ತಂದುಕೊಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿದರು.ಇದನ್ನೂ ಓದಿ: PUBLiC TV ಇಂಪ್ಯಾಕ್ಟ್ | KSRTC ಬಸ್‌ನಲ್ಲಿ ಟಿಕೆಟ್ ಕೊಡ್ತಿದ್ದ ಖಾಸಗಿ ವ್ಯಕ್ತಿ ಮೇಲೆ ದೂರು – ಕಂಡಕ್ಟರ್ ಸಸ್ಪೆಂಡ್