ಮುಂಬೈ: ವಿದ್ಯಾರ್ಥಿಯೊಬ್ಬ ಮುಂಬೈನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕ್ಯಾಂಪಸ್‍ನ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಶರಣಾಗಿದ್ದಾನೆ.
ಮೃತ ದುರ್ದೈವಿ 26 ವರ್ಷದ ಯುವಕನಾಗಿದ್ದು, ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾನೆ. ಇಂದು ಮುಂಜಾನೆ 4.30ರ ಸುಮಾರಿಗೆ ಕ್ಯಾಂಪಸ್ ಕಟ್ಟಡದ ಏಳನೇ ಮಹಡಿಯಿಂದ ಯುವಕ ಜಿಗಿದಿದ್ದು, ಆತನನ್ನು ಕೂಡಲೇ ಘಾಟ್ಕೋಪರ್ ನ ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ವಜ್ರ ಖಚಿತ ಐಫೋನ್ ಕದ್ದು ವಾಟ್ಸಪ್ ಸ್ಟೇಟಸ್‍ನಲ್ಲಿ ಸಿಕ್ಕಿ ಬಿದ್ರು
Advertisement
Advertisement
ಈ ಘಟನೆ ಸಂಬಂಧಿಸಿದಂತೆ ಪೊಲೀಸರು ಆತನ ಹಾಸ್ಟೆಲ್ ಪರಿಶೀಲನೆ ನಡೆಸಿದಾಗ ಡೆತ್ ನೋಟ್ ಸಿಕ್ಕಿದ್ದು, ಪತ್ರದಲ್ಲಿ ವಿದ್ಯಾರ್ಥಿ ತಾನು ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾನೆ. ಅಲ್ಲದೇ ತನ್ನ ಸಾವಿಗೆ ಯಾರನ್ನೂ ಸಹ ಹೊಣೆಗಾರರನ್ನಾಗಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?
Advertisement
Maharashtra | A 26-yr-old PG student of IIT Bombay died by suicide this morning, by jumping from the hostel’s 7th floor. In his recovered suicide note, he stated he had depression & was under treatment, he didn’t hold anyone responsible; further probe is underway: Mumbai Police
— ANI (@ANI) January 17, 2022
Advertisement
ಈ ಸಂಬಂಧ ಪೊವಾಯಿ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ.