CrimeLatestMain PostNational

ಏಳನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – ಹಾಸ್ಟೆಲ್‍ನಲ್ಲಿ ಡೆತ್ ನೋಟ್ ಪತ್ತೆ

ಮುಂಬೈ: ವಿದ್ಯಾರ್ಥಿಯೊಬ್ಬ ಮುಂಬೈನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕ್ಯಾಂಪಸ್‍ನ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಶರಣಾಗಿದ್ದಾನೆ.

ಮೃತ ದುರ್ದೈವಿ 26 ವರ್ಷದ ಯುವಕನಾಗಿದ್ದು, ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾನೆ. ಇಂದು ಮುಂಜಾನೆ 4.30ರ ಸುಮಾರಿಗೆ ಕ್ಯಾಂಪಸ್ ಕಟ್ಟಡದ ಏಳನೇ ಮಹಡಿಯಿಂದ ಯುವಕ ಜಿಗಿದಿದ್ದು, ಆತನನ್ನು ಕೂಡಲೇ ಘಾಟ್ಕೋಪರ್ ನ ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ವಜ್ರ ಖಚಿತ ಐಫೋನ್ ಕದ್ದು ವಾಟ್ಸಪ್ ಸ್ಟೇಟಸ್‍ನಲ್ಲಿ ಸಿಕ್ಕಿ ಬಿದ್ರು

ಈ ಘಟನೆ ಸಂಬಂಧಿಸಿದಂತೆ ಪೊಲೀಸರು ಆತನ ಹಾಸ್ಟೆಲ್ ಪರಿಶೀಲನೆ ನಡೆಸಿದಾಗ ಡೆತ್ ನೋಟ್ ಸಿಕ್ಕಿದ್ದು, ಪತ್ರದಲ್ಲಿ ವಿದ್ಯಾರ್ಥಿ ತಾನು ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾನೆ. ಅಲ್ಲದೇ ತನ್ನ ಸಾವಿಗೆ ಯಾರನ್ನೂ ಸಹ ಹೊಣೆಗಾರರನ್ನಾಗಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

ಈ ಸಂಬಂಧ ಪೊವಾಯಿ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published.

Back to top button