ಅಜಿತ್ ಕುಮಾರ್ (Ajith Kumar) ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ (Good Bad Ugly) ಚಿತ್ರ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಈ ಬೆನ್ನಲ್ಲೇ ಚಿತ್ರಕ್ಕೆ ಸಂಕಷ್ಟವೊಂದು ಎದುರಾಗಿದೆ. ತನ್ನ ಸಂಯೋಜನೆಯ 3 ಹಾಡುಗಳನ್ನು ಅನುಮತಿ ಇಲ್ಲದೆ ಬಳಸಿದ್ದಕ್ಕಾಗಿ ಚಿತ್ರತಂಡಕ್ಕೆ ಇಳಯರಾಜ 5 ಕೋಟಿ ರೂ. ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಇದನ್ನೂ ಓದಿ:ರಜನಿಕಾಂತ್ ಸಿನಿಮಾಗೆ ನೋಟಿಸ್ ಕೊಟ್ಟ ಸಂಗೀತ ನಿರ್ದೇಶಕ ಇಳಯರಾಜ
ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಏ.10ರಂದು ರಿಲೀಸ್ ಆಗಿತ್ತು. ಈ ಚಿತ್ರದಲ್ಲಿ ಹಳೆಯ ತಮಿಳು ಸಿನಿಮಾಗಳ ಹಾಡುಗಳನ್ನು ಬಳಕೆ ಮಾಡಿಕೊಂಡಿದ್ದಾರೆ. ಒತ್ತಾ ರುಪಾಯುಮ್ ಥಾರೆನ್, ಇಲಮೈ ಇಧೊ ಇಧೋ, ಎನ್ ಜೋಡಿ ಮಂಜಾ ಕುರುವಿ ಹಾಡುಗಳನ್ನು ಮರುಬಳಕೆ ಮಾಡಿಕೊಳ್ಳಲಾಗಿದೆ. ಈ ಎಲ್ಲಾ ಹಾಡುಗಳನ್ನು ಸಂಗೀತ ಸಂಯೋಜನೆ ಮಾಡಿರೋದು ಇಳಯರಾಜ. ಆದರೆ ಈ ಹಾಡುಗಳನ್ನು ಬಳಕೆ ಮಾಡಿಕೊಳ್ಳಲು ಚಿತ್ರತಂಡ ಇಳಯರಾಜ ಬಳಿ ಯಾವುದೇ ಅನುಮತಿಯನ್ನು ಪಡೆದುಕೊಂಡಿಲ್ಲ.
ಹಾಗಾಗಿ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ವಿರುದ್ಧ ಇಳಯರಾಜ (Ilayaraja) ಕಾನೂನು ಸಮರ ಸಾರಿದ್ದಾರೆ. ತಮ್ಮ ಅನುಮತಿ ಪಡೆಯದೆ ಹಾಡು ಬಳಸಿದ್ದಕ್ಕೆ ಚಿತ್ರತಂಡಕ್ಕೆ 5 ಕೋಟಿ ರೂ. ಕೊಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಹಾಗಾದ್ರೆ ಚಿತ್ರತಂಡ ಮುಂದಿನ ನಡೆಯೇನು ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ:‘ಅಗ್ನಿಸಾಕ್ಷಿ’ ನಟಿ ವೈಷ್ಣವಿ ಗೌಡ ಎಂಗೇಜ್‌ಮೆಂಟ್ ಫೋಟೋ ಗ್ಯಾಲರಿ
ಈ ಸಿನಿಮಾದಲ್ಲಿ ಅಜಿತ್ ಜೊತೆ ತ್ರಿಷಾ, ಪ್ರಿಯಾ ವಾರಿಯರ್ ನಟಿಸಿದ್ದರು. ಈ ಸಿನಿಮಾ ಆಗಿ 5 ದಿನಗಳಲ್ಲಿ 100 ಕೋಟಿ ರೂ. ಗಳಿಕೆ ಮಾಡಿದೆ. ಈ ಸಿನಿಮಾದ ಯಶಸ್ಸಿಗೆ ಈ ಹಾಡುಗಳು ಪ್ಲಸ್ ಆಗಿತ್ತು.