ಬೀಚ್‌ನಲ್ಲಿ ಬೇಬಿ ಬಂಪ್ ಪ್ರದರ್ಶಿಸಿದ ನಟಿ ಇಲಿಯಾನಾ

Public TV
1 Min Read
ileana druz

ಬಾಲಿವುಡ್ (Bollywood) ನಟಿ ಇಲಿಯಾನಾ ಡಿಕ್ರೂಜ್ (Ileana D’cruz) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸದ್ಯ ವೆಕೇಷನ್ ಮೂಡ್‌ನಲ್ಲಿದ್ದಾರೆ. ಹಳದಿ ಬಣ್ಣದ ಬಿಕಿನಿ ಧರಿಸಿ ಬೀಚ್‌ನಲ್ಲಿ ಸೂರ್ಯ ಕಿರಣಗಳ ಸ್ಪರ್ಶವನ್ನ ನಟಿ ಎಂಜಾಯ್ ಮಾಡ್ತಿದ್ದಾರೆ. ಇದನ್ನೂ ಓದಿ:ಮೈಸೂರಿಗೆ ಬಂದಿಳಿದ ನಟ ಉಸ್ತಾದ್ ರಾಮ್ ಪೋತಿನೇನಿ

ileana

ನಟಿ ಇಲಿಯಾನಾ ಕೆಲ ದಿನಗಳ ಹಿಂದೆ ತಾವು ತಾಯಿಯಾಗುತ್ತಿರುವ ವಿಷ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರು. ಆಗಾಗ ಬೇಬಿ ಬಂಪ್ ಫೋಟೋ ಶೇರ್ ಮಾಡುತ್ತಾ ನಟಿ ಸದ್ದು ಮಾಡ್ತಿರುತ್ತಾರೆ. ಚೊಚ್ಚಲ ಮಗುವಿನ ಬರುವಿಕೆಯ ಖುಷಿಯಲ್ಲಿದ್ದಾರೆ.

ಮದುವೆಯಾಗದೇ ತಾಯಿಯಾಗಿರುವ ನ್ಯೂಸ್ ಹಂಚಿಕೊಂಡ ನಟಿ ಇಲಿಯಾನಾಗೆ, ಮಗುವಿನ ತಂದೆ ಯಾರು ಎಂಬ ಟೀಕೆಗಳಿಗೆ ಕ್ಯಾರೆ ಎನ್ನದೇ ಮುಂದೆ ಸಾಗುತ್ತಿದ್ದಾರೆ. ಸದ್ಯ ನಟಿ ವೆಕೇಷನ್ ಮೂಡ್‌ನಲ್ಲಿದ್ದಾರೆ. ಹಳದಿ ಬಣ್ಣದ ಬಿಕಿನಿ ಧರಿಸಿ ಬೇಬಿ ಬಂಪ್ ಲುಕ್ ತೋರಿಸಿದ್ದಾರೆ.

ಬಾಲಿವುಡ್ ನಟಿ ಕತ್ರಿನಾ ಕೈಫ್ ಸಹೋದರ ಸಬಾಸ್ಟಿನ್ ಜೊತೆ ಇಲಿಯಾನಾ ಡೇಟಿಂಗ್ ಮಾಡ್ತಿದ್ದರು. ಹಲವು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.

Share This Article