ಹುಬ್ಬಳ್ಳಿ: ನಗರದ ಸಿದ್ಧಾರೂಢ ರೈಲ್ವೆ ನಿಲ್ದಾಣದಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ಸೀರೆ ಪ್ರದರ್ಶನ ಮತ್ತು ಮಳಿಗೆ ತೆರೆಯಲಾಗಿದೆ. ಈ ಮಳಿಗೆಗಳಿಗೆ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಚಾಲನೆ ನೀಡಿದರು.
ಕೇಂದ್ರ ಸರ್ಕಾರ ಇತ್ತೀಚೆಗೆ ಮಂಡಿಸಿದ ಬಜೆಟ್‍ನಲ್ಲಿ ಸ್ಥಳೀಯ ಉತ್ಪನ್ನಗಳು, ಕುಶಲಕರ್ಮಿಗಳು ಮತ್ತು ಕೈಗಾರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತಂದಿದೆ. ಒಂದು ನಿಲ್ದಾಣ-ಒಂದು ಉತ್ಪನ್ನ ಎಂಬ ಕಾರ್ಯಕ್ರಮದಡಿ ನೈರುತ್ಯ ರೈಲ್ವೆ ನಿಲ್ದಾಣದಲ್ಲಿ 4ನೇ ಸ್ಥಳೀಯ ಉತ್ಪನ್ನಗಳಲ್ಲಿ ಒಂದಾದ ಇಳಕಲ್ ಸೀರೆಯ ಮಳಿಗೆ ಆರಂಭಿಸಿಲಾಗಿದೆ. ಮೇ 25 ರಿಂದ ಜೂನ್ 7 ರವರೆಗೆ ಪ್ರದರ್ಶನ ಇರಲಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಆರೋಪ – ಡಿಕೆಶಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ
Advertisement
Advertisement
ಸಂಜೀವ್ ಕಿಶೋರ್ ಅವರು ಈ ಕುರಿತು ಮಾತನಾಡಿದ್ದು, ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‍ನಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹಿಸುವ ಮತ್ತು ಹೆಚ್ಚು ಪ್ರಚಾರ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತಂದಿದೆ. ಪ್ರತಿ ನಿತ್ಯ ರೈಲ್ವೆ ನಿಲ್ದಾಣಕ್ಕೆ ಅನೇಕ ಜನರು ಭೇಟಿ ನೀಡುತ್ತಾರೆ. ಈ ಹಿನ್ನೆಲೆ ಇಳಕಲ್ ಸೀರೆಯನ್ನು ರೈಲ್ವೆ ನಿಲ್ದಾಣದಲ್ಲಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
Advertisement
ಮಳಿಗೆ ಸ್ಥಾಪನೆಯಿಂದ ಸಾರ್ವಜನಿಕರಿಗೆ ಸ್ಥಳೀಯ ಉತ್ಪನ್ನಗಳ ಬಗ್ಗೆ ತಿಳಿಸಿಕೊಳ್ಳಲು ಮತ್ತು ಖರೀದಿಸಲು ಅನುಕೂಲವಾಗುತ್ತದೆ. ನಿಜವಾಗಲೂ ಒಂದು ಉತ್ತಮ ಯೋಜನೆ ಇದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮಹಿಳೆಗೆ ಕೊಲೆ ಬೆದರಿಕೆ – ಕೊಟ್ಟೂರು ಸ್ವಾಮೀಜಿ ವಿರುದ್ಧ ದೂರು ದಾಖಲು