ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರವಾಗಿ ನಟಿ ಪೂಜಾ ಗಾಂಧಿ ಮತ ಪ್ರಚಾರ ನಡೆಸಿದ್ದರು. ನಗರದ ಅಂಬೇಡ್ಕರ್ ವೃತ್ತದ ಬಳಿ ಆಗಮಿಸಿದ ನಟಿ ಪೂಜಾ ಗಾಂಧಿ ತಮ್ಮ ಸಿನಿಮಾದ ಹಾಡನ್ನು ಹಾಡುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಿದ್ರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ ಪೂಜಾ ಗಾಂಧಿ, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ರಾಷ್ಟ್ರೀಯ ಪಕ್ಷಗಳು ಪರಿಹರಿಸುವಲ್ಲಿ ಸೋತಿದೆ. ಹೀಗಾಗಿ ಪ್ರಾದೇಶಿಕ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಅಂತಾ ಅಂದ್ರು.
ಕಾರವಾರ ತಾಲೂಕಿನಲ್ಲಿ ಮೀನುಗಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಮೀನುಗಾರರನ್ನು ಬೀದಿಗೆ ತಂದಿದೆ. ಕಾರವಾರದ ಜನರು ಉದ್ಯೋಗಕ್ಕಾಗಿ ಗೋವಾವನ್ನು ಅವಲಂಭಿಸುವಂತಾಗಿದೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದರು.
ಈ ತಿಂಗಳ 11ನೇ ತಾರೀಖಿನವರೆಗೆ ಇಡೀ ಕರ್ನಾಟಕದಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪೂಜಾ ಗಾಂಧಿ ತಿಳಿಸಿದ್ದಾರೆ.