Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆ – ದೇಗುಲ, ಆಶ್ರಮಗಳಲ್ಲಿ ತಪಾಸಣೆ ನಡೆಸುವಂತೆ ಉತ್ತರಾಖಂಡ ಹೈಕೋರ್ಟ್ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆ – ದೇಗುಲ, ಆಶ್ರಮಗಳಲ್ಲಿ ತಪಾಸಣೆ ನಡೆಸುವಂತೆ ಉತ್ತರಾಖಂಡ ಹೈಕೋರ್ಟ್ ಸೂಚನೆ

Court

ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆ – ದೇಗುಲ, ಆಶ್ರಮಗಳಲ್ಲಿ ತಪಾಸಣೆ ನಡೆಸುವಂತೆ ಉತ್ತರಾಖಂಡ ಹೈಕೋರ್ಟ್ ಸೂಚನೆ

Public TV
Last updated: February 19, 2026 3:56 pm
Public TV
Share
2 Min Read
Uttarakhand highcourt
SHARE

ಹರಿದ್ವಾರದ ಕೆಲವು ಧಾರ್ಮಿಕ ಸ್ಥಳಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ಪ್ರಸ್ತಾಪಿಸಿರುವ ಉತ್ತರಾಖಂಡ ಹೈಕೋರ್ಟ್ (Uttarakhand) ಪರಿಸ್ಥಿತಿ ಚಿಂತಾಜನಕವಾಗಿದ್ದು, ದೇಗುಲ ಮತ್ತು ಆಶ್ರಮಗಳಲ್ಲಿ ದಿಢೀರ್ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದೆ.

ಮಹಿಳೆಯೊಂದಿಗೆ ಸಹಜೀವನ ನಡೆಸುತ್ತಿರುವ ಆರೋಪವೂ ಸೇರಿದಂತೆ ಮಾ ಚಂಡಾ ದೇವಿ ದೇಗುಲದ ಮುಖ್ಯ ಅರ್ಚಕರ ವಿರುದ್ಧ ದಾಖಲಾಗಿರುವ ವಿವಿಧ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ರಾಕೇಶ್ ತಪ್ಲಿಯಾಲ್ ಈ ನಿರ್ದೇಶನ ನೀಡಿದ್ದಾರೆ. ದೇವಾಲಯ ನಿರ್ವಹಿಸುತ್ತಿರುವವರ ವಿರುದ್ಧ ಇಂತಹ ಹಲವು ಅಪರಾಧ ಪ್ರಕರಣಗಳು ದಾಖಲಾಗುತ್ತಿರುವುದನ್ನು ಗಮನಿಸಿರುವುದಾಗಿ ನ್ಯಾಯಾಲಯ ತಿಳಿಸಿದೆ. ಅಂತೆಯೇ ಧಾರ್ಮಿಕ ಸ್ಥಳಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಕುರಿತು ಪರಿಶೀಲಿಸಲು ದಿಢೀರ್ ತಪಾಸಣೆ ನಡೆಸಲು ತಂಡ ರಚಿಸುವಂತೆ ಸೂಚಿಸಿದೆ. ಅಕ್ರಮ ಚಟುಚಟಿಕೆಗಳು ದೇವಾಲಯಗಳಲ್ಲಿ ನಡೆಯುತ್ತಿವೆ ಎಂಬಂತಹ ಕಾಲವೂ ಬಂತೇ? ಎಂದು ಪೀಠ ಬೇಸರ ವ್ಯಕ್ತಪಡಿಸಿದೆ. ಜೊತೆಗೆ ದೇಗುಲಗಳನ್ನು ಉಳಿಸಿ ಎಂದು ಬುದ್ಧಿವಾದ ಹೇಳಿದೆ. ಇದನ್ನೂ ಓದಿ: ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು – ಸುಪ್ರೀಂ

ದೇಶ, ವಿದೇಶಗಳ ವಿವಿಧೆಡೆಯಿಂದ ಭಕ್ತಾದಿಗಳು ಇಲ್ಲಿ ದೇವರಿದ್ದಾರೆ ಎಂದು ಬರುತ್ತಾರೆ. ಆದರೆ, ಇಂತಹ ಮಂದಿರಗಳಲ್ಲಿಯೇ ಅಲ್ಲಿನ ಮಹಾಂತರು ಈ ಎಲ್ಲ ಚಟುವಟಿಕೆಗಳನ್ನು ನಡೆಸಿದ್ದಾರೆ. ಮೊದಲಿನ ಪ್ರಕರಣದಲ್ಲಿ ವಿಚ್ಛೇದನ ಪ್ರಕ್ರಿಯೆ ನಡೆಯುತ್ತಿದೆ, ಮುಂದುವರಿದು ಈಗ ಲಿವ್-ಇನ್ ಸಂಬಂಧ ಕೇಳಿಬಂದಿದೆ. ಲಿವ್ ಇನ್ ಸಂಬಂಧ ಇರುವವರ ಜೊತೆಗೆ ಮಗುವೂ ಆಗಿದೆ. ಇದಲ್ಲದೆ ಪಂಜಾಬ್ ಪೊಲೀಸರು ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ ಎಂದು ನ್ಯಾಯಾಲಯ ಪ್ರಕರಣದ ಬಗ್ಗೆ ತೀವ್ರ ಬೇಸರ ಹೊರಹಾಕಿದೆ.

ದಿಢೀರ್ ತಪಾಸಣೆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ತಿಳಿಸಿದೆ. ಆಶ್ರಮ, ದೇವಾಲಯಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದರೆ ಅದು ಅತ್ಯಂತ ಚಿಂತಾಜನಕ ಸ್ಥಿತಿ ಎಂದು ತಿಳಿಸಿದೆ. ದೇವಾಲಯದ ಪ್ರಧಾನ ಅರ್ಚಕ ರೋಹಿತ್ ಗಿರಿ ಅವರ ವಿರುದ್ಧ ಮಹಿಳೆಯೊಬ್ಬರ ವಿಚ್ಛೇದನ ಪ್ರಕ್ರಿಯೆ ನಡೆಯತ್ತಿರುವಾಗಲೇ ಆಕೆಯೊಂದಿಗೆ ಸಹಜೀವನದಲ್ಲಿ ತೊಡಗಿ ಮಗು ಪಡೆದಿರುವುದು. ಜೊತೆಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿವಿಧ ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಿರುವ ನ್ಯಾಯಾಲಯ ಇಂತಹ ಘಟನೆಗಳಿಂದ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದಿದೆ. ಕನಿಷ್ಠ ದೇವಾಲಯ, ಮಸೀದಿ, ಗುರುದ್ವಾರಗಳಂತಹ ಪವಿತ್ರ ಸ್ಥಳಗಳನ್ನು ಇಂತಹ ಚಟುವಟಿಕೆಗಳಿಂದ ಉಳಿಸಬೇಕೆಂದು ಖಡಕ್ ಎಚ್ಚರಿಕೆ ನೀಡಿದೆ.

ದೇವರಿಗೆಂದು ಭಕ್ತಾದಿಗಳು ನೀಡುವ ದೇಣಿಗೆ ಹಣವನ್ನು ಭೋಗಲಾಲಸೆಗೆ ಬಳಸುವ ಅರ್ಚಕರ ಪ್ರವೃತ್ತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಭಕ್ತರು ಕೊಡುವ ದಾನ ನಿಮ್ಮ ಕೌಟುಂಬಿಕ ಜೀವನಕ್ಕಾಗಿಯೇ? ಎಂದು ಕಿಡಿಕಾರಿದೆ. ದಾನ ನೀಡುವುದು ಸಾಮಾಜಿಕ ಸೇವೆಗಳ ಉದ್ದೇಶಕ್ಕಾಗಿ ಎಂದು ತಿಳಿಸಿದೆ.

ಈ ಹಿಂದೆ ದೇವಸ್ಥಾನಕ್ಕೆ ಸಂಬಂಧಿಸಿದ ಟ್ರಸ್ಟ್‌ನ ಅವ್ಯವಸ್ಥೆಯನ್ನು ಗಣನೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ಟ್ರಸ್ಟ್ ಕಾರ್ಯವೈಖರಿ ಮೇಲ್ವಿಚಾರಣೆ ಮಾಡುವಂತೆ ಬದರೀನಾಥ, ಕೇದಾರನಾಥ ದೇವಸ್ಥಾನ ಸಮಿತಿಗೆ (ಬಿಕೆಟಿಸಿ) ಸೂಚಿಸಿತ್ತು. ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ 2025ರ ಆಗಸ್ಟ್‌ನಲ್ಲಿ ಸ್ಪಷ್ಟಪಡಿಸಿತ್ತು. ಅಲ್ಲದೆ ಹರಿದ್ವಾರ ಜಿಲ್ಲಾಧಿಕಾರಿ ತನಿಖೆ ನಡೆಸಬೇಕು ಮತ್ತು ಬಿಕೆಟಿಸಿ ಹೈಕೋರ್ಟ್‌ಗೆ ನಿಯಮಿತ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ಬಿಕೆಟಿಸಿ ಸುಪರ್ದಿಗೆ ಬಂದ ಬಳಿಕ ದೇವಸ್ಥಾನದ ಆದಾಯದಲ್ಲಿ ಹೆಚ್ಚಳವಾಗಿದ್ದು, ಅತಿಕ್ರಮಣ ತೆರವುಗೊಳಿಸಲಾಗಿದೆ ಎಂದು ವಿಚಾರಣೆ ವೇಳೆ ನ್ಯಾಯಾಲಯಕ್ಕೆ ತಿಳಿಸಲಾಯಿತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ನವೀಕೃತ ವರದಿ ಕೇಳಿದ ಹೈಕೋರ್ಟ್ ತನಿಖೆಗೆ ಸಹಕರಿಸದಿದ್ದರೆ ಅರ್ಚಕ ಗಿರಿಗೆ ನೀಡಿರುವ ಮಧ್ಯಂತರ ರಕ್ಷಣೆಯನ್ನು ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಮೈಸೂರು| ಸರ್ಕಾರದ ಜಾಗದಲ್ಲಿ ಹೈಟೆಕ್ ಪೌಲ್ಟ್ರಿ

TAGGED:dehradunreligious placeUttarakhand High Courtಉತ್ತರಾಖಂಡ ಹೈಕೋರ್ಟ್ಡೆಹ್ರಾಡೂನ್ಧಾರ್ಮಿಕ ಸ್ಥಳ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
4 hours ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
4 hours ago
SHARANYA 1
Districts

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Public TV
By Public TV
4 hours ago
Weather
Districts

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಆರ್ಭಟ – ಆರೋಗ್ಯ ಇಲಾಖೆ ಅಲರ್ಟ್

Public TV
By Public TV
5 hours ago
siddu bommai
Bagalkot

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬೊಮ್ಮಾಯಿ

Public TV
By Public TV
5 hours ago
Boeing 787 air india dreamliner
Latest

ಮೇ 31 ರವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?