ಮೈಸೂರು: ವೀಸಾ, ಪಾಸ್ ಪೋರ್ಟ್ ಇಲ್ಲದೆ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ವೀಸಾ, ಪಾಸ್ ಪೋರ್ಟ್ ಇಲ್ಲದೆ ಅನಧಿಕೃತವಾಗಿ ವಾಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳನ್ನು ನಂಜನಗೂಡು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ಸಾತ್ ಕಿರ ಜಿಲ್ಲೆಯ ಸಾಮ್ ನಗರದ ಶಿರ್ ಗುಲ್ ಘಾಟ್ ನಿವಾಸಿಗಳಾದ ಮೊಹಮದ್ ಅಬ್ದುಲ್ಲಾ(27) ಹಾಗೂ ಮೊಹಮದ್ ಹಬೀಬುಲ್ಲಾ(23) ಬಂಧಿತರು.
Advertisement
Advertisement
ಕಳೆದ ಒಂದು ವರ್ಷದಿಂದ ಈ ಇಬ್ಬರು ಇಮ್ಮಾವು ಗ್ರಾಮದಲ್ಲಿ ನೆಲೆಸಿದ್ದು, ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ರಿಷಿ ಫ್ಯಾಬ್ರಿಕ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಅನುಮಾನ ಬಂದ ಕಾರಣ ಪೊಲೀಸರು ಇವರ ವಿಚಾರಣೆ ನಡೆಸಿದ್ದು, ಈ ವೇಳೆ ಪಾಸ್ ಪೋರ್ಟ್ ಹಾಗೂ ವೀಸಾ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಪಾಸ್ ಪೋರ್ಟ್ ಕಾಯ್ದೆ 1976 ಹಾಗೂ ಭಾರತೀಯ ವಿದೇಶಿಯರ ಕಾಯ್ದೆ 1946 ಅನ್ವಯ ಬಂಧಿಸಲಾಗಿದೆ.
Advertisement
ಆರೋಪಿಗಳನ್ನು ಪ್ರಸ್ತುತ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.