ಬೆಳ್ಳಂಬೆಳಗ್ಗೆ ಮಡಿಕೇರಿ ನಗರದಲ್ಲಿ ಜೆಸಿಬಿ ಘರ್ಜನೆ

Public TV
1 Min Read
jcb madiker

ಮಡಿಕೇರಿ: ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿಕೊಂಡು ನಗರಸಭೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಕಲಾವಿದನ ಫೋಟೋ ಗ್ಯಾಲರಿಯನ್ನು ಇಂದು ಬೆಳ್ಳಂಬೆಳಗ್ಗೆ ನಗರಸಭೆಯ ಅಧಿಕಾರಿಗಳು ತೆರವು ಮಾಡಿದರು.

ಮಡಿಕೇರಿ ನಗರದ ಚೈನ್ ಗೇಟ್ ಬಳಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿದ ಚಿತ್ರ ಕಲಾವಿದ ಹಾಗೂ ಕುಟುಂಬ ವರ್ಗದವರು ತೆರವು ಕಾರ್ಯಚರಣೆ ನಡೆಸುವ ಸಂದರ್ಭದಲ್ಲಿ ಹೈಡ್ರಾಮ ನಡೆಯಿತು. ಕಳೆದ ಬಾರಿಯು ತೆರವು ಕಾರ್ಯಚರಣೆ ಮಾಡಲು ಮುಂದಾಗಿರುವ ಸಂದರ್ಭದಲ್ಲಿ ಚಿತ್ರಕಲಾವಿದ ಸಂದೀಪ್ ಮತ್ತು ಕುಟುಂಬದಿಂದ ಗ್ಯಾಸ್ ಆನ್ ಮಾಡಿ ಬೆಂಕಿ ಹಚ್ಚಿಕೊಳ್ಳುತ್ತೇವೆ ಎಂದು ನಗರಸಭೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಆನ್‍ಲೈನ್ ವ್ಯವಹಾರಕ್ಕೂ ಮುನ್ನ ಎಚ್ಚರ- 100 ರೂ. ಲಿಪ್‍ಸ್ಟಿಕ್‍ಗೆ ಕಳೆದುಕೊಂಡಿದ್ದು 3 ಲಕ್ಷ ರೂ.!

jcb madikeri

ಆದರೆ ಇಂದು ಮಡಿಕೇರಿ ತಹಶೀಲ್ದಾರ್ ಮಹೇಶ್ ನಗರಸಭೆ ಆಯುಕ್ತ ರಾಮದಾಸ್ ನೇತೃತ್ವದಲ್ಲಿ ಫೋಟೋ ಗ್ಯಾಲರಿ ತೆರವು ಕಾರ್ಯಚರಣೆ ಮಾಡಲಾಯಿತು. ಬೆಳಿಗ್ಗೆ 6:30ರ ಸುಮಾರಿಗೆ ನೂರಾರು ಪೊಲೀಸರೊಂದಿಗೆ ಆಗಮಿಸಿದ ನಗರಸಭೆಯ ಅಧಿಕಾರಿಗಳು ಯಾವುದೇ ಮಾಹಿತಿ ಹಾಗೂ ನೋಟಿಸ್ ನೀಡದೆ ಏಕಾಏಕಿ ಬಂದು ದೌರ್ಜನ್ಯ ನಡೆಸಿದ್ದಾರೆ ಎಂದು ಕಲಾವಿದನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಆ್ಯಸಿಡ್ ದಾಳಿಗೊಳಗಾದ ಯುವತಿ ಆರೋಗ್ಯದಲ್ಲಿ ಚೇತರಿಕೆ

Share This Article