ಹೆಚ್‌ಡಿಕೆ ನಿವಾಸಕ್ಕೆ ಅಕ್ರಮ ವಿದ್ಯುತ್‌ – ಮಾಜಿ ಸಿಎಂಗೆ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದ ಕಾಂಗ್ರೆಸ್‌

Public TV
2 Min Read
Illegal electricity to HD Kumaraswamy residence Congress said it was a tragedy 1

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ನಿವಾಸದ ದೀಪಾವಳಿಯ (Deepavali) ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್‌ ಗಂಭೀರ ಆರೋಪ ಮಾಡಿದೆ.

ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್‌ ಪೋಸ್ಟ್‌ ಮಾಡಿ ಕಿಡಿಕಾರಿದೆ.

Illegal electricity to HD Kumaraswamy residence Congress said it was a tragedy 2

ಪೋಸ್ಟ್‌ನಲ್ಲಿ ಏನಿದೆ?
ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ.  ಇದನ್ನೂ ಓದಿ: ಗ್ಯಾರಂಟಿಗಳ ಅನುಷ್ಠಾನದ ಚರ್ಚೆಗೆ ರೆಡಿ – ಸಿಎಂಗೆ ಹೆಚ್‍ಡಿಕೆ ಸವಾಲ್

ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ. ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್‌ಗಳಿವೆಯಲ್ಲವೇ!

ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ʼಬರʼ ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ ʼಕರ್ನಾಟಕ ಕತ್ತಲಲ್ಲಿದೆ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ. ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?   ಇದನ್ನೂ ಓದಿ: ಗಾಜಾದ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಹಮಾಸ್‌ ಉಗ್ರರ ಸುರಂಗ – ಇಸ್ರೇಲ್‌ನಿಂದ ವಿಡಿಯೋ ರಿಲೀಸ್‌

 

ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ ʼದಿವಾಳಿʼಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು?

 

Share This Article