ಬೆಂಗಳೂರು: ಅಕ್ರಮವಾಗಿ ಗ್ಯಾಸ್ ರೀಫಿಲಿಂಗ್ ದಂಧೆ ನಡೆಸುತ್ತಿದ್ದ ಅಂಗಡಿಯಲ್ಲಿ ಏಕಕಾಲಕ್ಕೆ ಸರಣಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಗೋವಿಂದ ರಾಜನಗರದ ಭರತ್ ಗ್ಯಾಸ್ ಏಜೆನ್ಸಿಯಲ್ಲಿ ನಡೆದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಇಬ್ಬರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ವಸ್ತುಗಳು ಜಖಂಗೊಂಡಿವೆ. ಪರಿಶೀಲನೆ ವೇಳೆ ಅಕ್ರಮವಾಗಿ ಗ್ಯಾಸ್ ರೀಫಿಲಿಂಗ್ ದಂಧೆ ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದ್ದು. ಸ್ಫೋಟಗೊಂಡ ಬೆನ್ನಲ್ಲೇ ಗ್ಯಾಸ್ ಏಜೆನ್ಸಿ ಮಾಲೀಕ ನಾಪತ್ತೆಯಾಗಿದ್ದಾನೆ. ಇದನ್ನೂ ಓದಿ: ಅಮಲು ಪದಾರ್ಥ ಸೇವಿಸಿ ರಂಪಾಟ – ಉಡುಪಿ ಪೊಲೀಸರಿಗೆ ವಿದ್ಯಾರ್ಥಿಗಳಿಂದ ಅವಾಜ್
ಪೊಲೀಸರು ಮತ್ತು ಅಗ್ನಿ ಶಾಮಕದಳದವರು ಬಿಲ್ಡಿಂಗ್‍ನಲ್ಲಿದ್ದ ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಬಂದು ರಕ್ಷಿಸಿದ್ದಾರೆ. ಇದನ್ನೂ ಓದಿ: ಇನ್ನೊಂದು ಮದುವೆಯಾಗ್ತೀನಿ ಎಂದ ತಂದೆಯನ್ನು ಕೊಂದ ಮಗ!