ಹಾಸನ: ಅಕ್ರಮ ಭೂಮಿ ಮಂಜೂರಾತಿ ಪ್ರಕರಣದಲ್ಲಿ (Illegal Land Regularisation Case) ಜೆಡಿಎಸ್‌ನ (JDS) ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ( K.S Lingesh) ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2018 ರಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಲಿಂಗೇಶ್ ಅವರು ಶಾಸಕಾರಾಗಿ ಆಯ್ಕೆಯಾಗಿದ್ದರು. ಆಗ ಅವರು ಬಗರ್ ಹುಕುಂ ಕಮಿಟಿಯ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಅಕ್ರಮವಾಗಿ ಭೂಮಿ ಮಂಜೂರಾತಿ ಮಾಡಿರುವ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಇದನ್ನೂ ಓದಿ: ಕೊಕ್ಕನೂರು ಶಾಲೆ ಮುಖ್ಯ ಶಿಕ್ಷಕ ಆತ್ಮಹತ್ಯೆ ಕೇಸ್ – 11 ಮಂದಿ ವಿರುದ್ಧ ಎಫ್‌ಐಆರ್
ಅಕ್ರಮ ಭೂಮಿ ಮಂಜೂರಾತಿ ಆರೋಪದ ಬಗ್ಗೆ ಕೋಲಾರದ ಆರ್‌ಟಿಐ ಕಾರ್ಯಕರ್ತ ರಮೇಶ್‌ಕುಮಾರ್ ಬೇಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದರು. ಇದೀಗ ಸಿಐಡಿ ಪೊಲೀಸರ ತಂಡ ಹಳೇಬೀಡಿನಲ್ಲಿರುವ ಅವರ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆದು, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಈ ಪ್ರಕರಣದಲ್ಲಿ ಅಂದಿನ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಹಲವರು ಬೇಲ್‌ಗಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳಿಗೆ ಹಾಗೂ ಭೂಮಿ ಪಡೆದವರಿಗೆ ಬೇಲ್ ಸಿಕ್ಕಿತ್ತು. ಕೆ.ಎಸ್.ಲಿಂಗೇಶ್ ಅವರಿಗೆ ಜಾಮೀನು ಸಿಕ್ಕಿರಲಿಲ್ಲ. ಇದನ್ನೂ ಓದಿ: ಕೊಡಗಿನ ತಾಯಿ-ಮಗು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಮತಾಂತರ & ಲವ್ ಜಿಹಾದ್‌ಗೆ ದೊಡ್ಡ ಸಂಚು
