ಚೆನ್ನೈ: ಕೇರಳದ ಮೆಡಿಕಲ್ ಶಾಪ್‍ನಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದರೆ, ಈಗ ತಮಿಳುನಾಡಿನಲ್ಲಿ ದೇವಸ್ಥಾನದಲ್ಲಿ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಕಡಲೂರು ಸಮೀಪದ ವಿರುಧಗಿರಿಶ್ವರರ್ ದೇವಾಲಯದ ಆವರಣದಲ್ಲಿ ಮದ್ಯ ಮಾರಾಟವಾಗುತ್ತಿರುವ ದೃಶ್ಯವನ್ನು ತಮಿಳುವಾಹಿನಿಯೊಂದು ಪ್ರಸಾರಮಾಡಿದೆ.
Advertisement
ಪುದಿಯ ಥಲೈಮುರೈ ವಾಹಿನಿ ಈ ಸುದ್ದಿಯನ್ನು ಪ್ರಕಟಿಸಿದ್ದು, ಬೆಳಗ್ಗೆ 6 ಗಂಟೆಯಿಂದ 10 ಗಂಟೆಯ ಅವಧಿಯಲ್ಲಿ ದೇವಾಲಯದ ಕೆರೆಯ ಸಮೀಪದಲ್ಲಿ ವ್ಯಕ್ತಿಯೊಬ್ಬ ಮದ್ಯವನ್ನು ಮಾರಾಟ ಮಾಡುತ್ತಿರುವ ದೃಶ್ಯವನ್ನು ತೋರಿಸಿದೆ.
Advertisement
ಆವರಣದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಅಷ್ಟೇ ಅಲ್ಲದೇ ಮದ್ಯ ಮಾರಾಟ ಮಾಡುತ್ತಿರುವುದರಿಂದ ಭಕ್ತರು ಸಹ ಈ ಕರೆಯ ಹತ್ತಿರ ಬರುತ್ತಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
Advertisement
ವಾಹಿನಿಯಲ್ಲಿ ಸುದ್ದಿ ಪ್ರಸಾರವಾದ ಬಳಿಕ ಕಡಲೂರು ಜಿಲ್ಲೆಯ ಎಸ್‍ಪಿ ವಿಜಯ್‍ಕುಮಾರ್ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Advertisement
ಸುಪ್ರೀಂ ಹೇಳಿದ್ದು ಏನು?
ಮದ್ಯಪಾನದಿಂದಾಗಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 2017ರ ಏಪ್ರಿಲ್ 1ರ ಒಳಗಡೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಎರಡೂ ಬದಿಯ 500 ಮೀಟರ್ ವ್ಯಾಪ್ತಿಯಲ್ಲಿನ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಿತ್ತು. ಅಷ್ಟೇ ಅಲ್ಲದೇ ಈ ಮದ್ಯದ ಅಂಗಡಿಗಳ ಪರಾವನಗಿಗಳನ್ನು ಮಾರ್ಚ್ 31ರ ಬಳಿಕ ನವೀಕರಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರ ನೇತೃತ್ವದ ಪೀಠ ಹೇಳಿತ್ತು.
ಇದನ್ನೂ ಓದಿ: ಹೈವೇಯಲ್ಲಿದ್ದ ಬಾರ್ ಕ್ಲೋಸ್ ಆದ್ರೇನು ಮೆಡಿಕಲ್ ಶಾಪಲ್ಲಿ ಮದ್ಯ ಸಿಗ್ತಿತ್ತು!