5.47 ಕೋಟಿ ಮೌಲ್ಯದ 2.43 ಲಕ್ಷ ಎಣ್ಣೆ ಬಾಟ್ಲಿಗಳ ಮೇಲೆ ಹರಿಯಿತು ರೋಡ್ ರೋಲರ್!

Public TV
1 Min Read
LIQUOR

ಅಮರಾವತಿ: 5.47 ಕೋಟಿ ಮೌಲ್ಯದ ಅಕ್ರಮ ಮದ್ಯವನ್ನು ಆಂಧ್ರಪ್ರದೇಶ(AndhraPradesh) ದ ಪೊಲೀಸರು ನಾಶಪಡಿಸಿದ್ದಾರೆ.

2.43 ಲಕ್ಷ ಮದ್ಯ(Liquor) ದ ಬಾಟ್ಲಿಗಳ ಮೇಲೆ ಪೊಲೀಸರು ರೋಡ್ ರೋಲರ್ (Road Roler) ಹರಿಸಿದ್ದಾರೆ. ಈ ಘಟನೆ ಎನ್‍ಟಿಆರ್ ಜಿಲ್ಲೆಯ ನಂದಿಗಾಮದಲ್ಲಿ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿಯೇ ಆಲ್ಕೋಹಾಲ್ ತುಂಬಿದ ಬಾಟ್ಲಿಗಳನ್ನು ನಾಶಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತೆಲಂಗಾಣ (Telangana) ದಿಂದ ಆಂಧ್ರಪ್ರದೇಶಕ್ಕೆ ಅಕ್ರಮವಾಗಿ ಮದ್ಯದ ಬಾಟ್ಲಿಗಳನ್ನು ಸಾಗಿಸಲಾಗುತ್ತಿತ್ತು. ಈ ವಿಚಾರ ನಮ್ಮ ಗಮನಕ್ಕೆ ಬಂತು. ಹೀಗಾಗಿ ನಾವು ದಾಳಿ ಮಾಡಿ 2 ಸಾವಿರ ಲೀಟರ್ ಅಕ್ರಮ ಮದ್ಯವನ್ನು ನಾಶಪಡಿಸಿದ್ದೇವೆ. ಅಲ್ಲದೆ ಈ ಸಂಬಂಧ 226 ಕೇಸ್ ದಾಖಲಿಸಿದ್ದೇವೆ ಎಂದು ವಿಜಯವಾಡದ ಪೊಲೀಸ್ ಆಯುಕ್ತ ಕಾಂತಿ ರಾಣಾ ಟಾಟಾ ವಿವರಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಸೀಟ್ ಬೆಲ್ಟ್ ಕಡ್ಡಾಯ – ಧರಿಸದಿದ್ದರೆ 1,000ರೂ. ದಂಡ

ANDHRA POLICE

ನಗರದ ಹೊರವಲಯದಲ್ಲಿರುವ ಎಲ್ಲಾ ಚೆಕ್ ಪೋಸ್ಟ್ (Check Post) ಗಳ ಮೇಲೆ ಏಕಾಏಕಿ ದಾಳಿ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇತರ ರಾಜ್ಯಗಳಿಂದ ಆಂಧ್ರಪ್ರದೇಶಕ್ಕೆ ಅಕ್ರಮ ಮದ್ಯ ಸಾಗಣೆಯಾಗಿರುವ ಕುರಿತು ವರದಿಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ವರ್ಷದ ಆರಂಭದಲ್ಲಿ ಕರ್ನೂಲ್‍ನಿಂದ 2 ಕೋಟಿ ಮೌಲ್ಯದ 66 ಸಾವಿರ ಮದ್ಯದ ಬಾಟ್ಲಿಗಳನ್ನು ಆಂಧ್ರ ಪ್ರದೇಶದ ವಿಶೇಷ ಜಾರಿ ಬ್ಯೂರೋ (SEB) ಸೀಜ್ ಮಾಡಿತ್ತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *