ಬೆಂಗಳೂರು: ಕೋವಿಡ್ (COVID-19) ಸಮಯದಲ್ಲಿ ಪಿಪಿಇ ಕಿಟ್ (PPE Kits) ಸೇರಿ ಹಲವು ಸಾಮಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವ ಹಿನ್ನಲೆ ಕಿದ್ವಾಯಿ ಆಸ್ಪತ್ರೆಯ (Kidwai Memorial Grant Institute) ಆರ್ಥಿಕ ಸಲಹೆಗಾರ ಜಿ.ಟಿ ರಘು (G.T. Raghu) ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.
ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಬೆಂಗಳೂರು ಇದರ ಆರ್ಥಿಕ ಸಲಹೆಗಾರರಾಗಿರುವ ಜಿ.ಟಿ.ರಘು ಅವರು ಈ ಹಿಂದೆ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಮತ್ತು ಟೆಂಡರ್… pic.twitter.com/ltoFKal2ou
— CM of Karnataka (@CMofKarnataka) October 7, 2024
ಸರ್ಕಾರದ ಅನುಮೋದನೆ ಇಲ್ಲದೇ ಪಿಪಿಇ ಕಿಟ್ ಹಾಗೂ ಸಾಮಾಗ್ರಿಗಳನ್ನ ಖರೀದಿ ಮಾಡಲಾಗಿದೆ. ಖರೀದಿಸಿರುವ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ. ನಿಯಮ ಉಲ್ಲಂಘನೆ ಆಗಿರುವುದು ತನಿಖಾ ವರದಿಯಲ್ಲಿ ಸ್ಪಷ್ಟವಾಗಿದೆ ಎಂದು ತನಿಖಾ ಸಮಿತಿ ನೀಡಿದ ವರದಿಯ ಆಧಾರದ ಮೇಲೆ ಅವರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಕಾಂತರಾಜು ಸಮಿತಿ ವರದಿಗೆ ಆಗ್ರಹ – ಅ.18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ
ಈ ಬಗ್ಗೆ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಬೆಂಗಳೂರು ಇದರ ಆರ್ಥಿಕ ಸಲಹೆಗಾರರಾಗಿರುವ ಜಿ.ಟಿ.ರಘು ಅವರು ಈ ಹಿಂದೆ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಮತ್ತು ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿರುವುದರಿಂದ ಇವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 2026ರ ವೇಳೆಗೆ ಸಂಪೂರ್ಣ ನಕ್ಸಲಿಸಂ ಮಟ್ಟ ಹಾಕಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು: ಅಮಿತ್ ಶಾ