ಮಂಡ್ಯ: ಯುವಕರ ಗುಂಪೊಂದು ಏಕಾಏಕಿ ಮನೆಗೆ ನುಗ್ಗಿ ವ್ಯಕ್ತಿಯೋರ್ವನನ್ನು ಕೋಲೆ ಮಾಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೊಗರಹಳ್ಳಿ ಗ್ರಾಮದಲ್ಲಿ ಜರುಗಿದೆ.
ಮೊಗರಹಳ್ಳಿ ಗ್ರಾಮ ಉದಯ್‍ಕುಮಾರ್ (36) ಕೊಲೆಯಾದ ವ್ಯಕ್ತಿ. ಸೋಮವಾರ ರಾತ್ರಿ ಉದಯ್‍ಕುಮಾರ್ ಮನೆಗೆ ಯುವಕರ ಗುಂಪೊಂದು ನುಗ್ಗಿ ಚಾಕುವಿನಿಂದ ಚುಚ್ಚಿದ್ದಾರೆ. ಚಾಕುವಿನಿಂದ ಚುಚ್ಚಿದ ಪರಿಣಾಮ ಉದಯ್‍ಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಉದಯ್‍ಕುಮಾರ್ ಸಾವನ್ನಪ್ಪಿದ ಬಳಿಕ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ.
ಉದಯ್‌ಕುಮಾರ್‌ಗೆ ಈಗಾಗಲೇ ಮದುವೆಯಾಗಿದೆ. ಆದರೂ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಈ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಕೆಆರ್‍ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.