ಹಾಸನ/ತುಮಕೂರು: ರಾಜ್ಯದ ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಬೀಜ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹಾಸನ ಜಿಲ್ಲೆಯ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲುವಿನ ಕಾರ್ತಿಕ್ ಟ್ರೇಡರ್ಸ್‌ನಲ್ಲಿ ಬೀಜ ಕಾಯ್ದೆ-1966 ಉಲ್ಲಂಘಿಸಿ ಯಾವುದೇ ಅನುಮತಿಯಿಲ್ಲದೆ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ. ಮೌಲ್ಯದ 180 ಕೆ.ಜಿ. ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.ಇದನ್ನೂ ಓದಿ: ದರ ಕುಸಿತ – ರೂಟರ್ ಹರಿಸಿ ಹೊಲದಲ್ಲೇ ಕೊತ್ತಂಬರಿ ಸೊಪ್ಪು ನಾಶಪಡಿಸಿದ ರೈತರು
ಅದೇ ರೀತಿ, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಗೇಶಿ ಹೋಬಳಿಯ ಹಸಿರು ಹೈಟೆಕ್ ಸೀಡ್ಸ್ ಕೇಂದ್ರದಲ್ಲಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಸುಮಾರು 86 ಸಾವಿರ ರೂ. ಮೌಲ್ಯದ 22 ಲೀಟರ್ ಸೂಕ್ಷ್ಮ ಪೋಷಕಾಂಶ ಮಿಶ್ರಣವನ್ನು ವಶಪಡಿಸಿಕೊಳ್ಳಲಾಗಿದೆ.
ಬೀಜ ಹಾಗೂ ರಸಗೊಬ್ಬರ ಮಾರಾಟಗಾರರು ನಿಯಮಬಾಹಿರವಾಗಿ ಚಟುವಟಿಕೆ ನಡೆಸುತ್ತಿರುವುದು ಕಂಡುಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಜು.5ಕ್ಕೆ ಆಮಿರ್ ಖಾನ್-ಗೌರಿ ಮದುವೆ; ಇಬ್ಬರ ಮಕ್ಕಳಿಂದಲೇ ವೆಡ್ಡಿಂಗ್ ಮೆನು ಫ್ಲ್ಯಾನ್
