ವಿಜಯನಗರ: ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ತೇಗದ ಮರ (Teak Wood) ಹಾಗೂ ಸೀಸನ್ ಕಟ್ಟಿಗೆಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸಪೇಟೆಯ(Hosapete) ಆಜಾದ್ ನಗರದ ನಿವಾಸಿಗಳಾದ ಇಬ್ರಾಹಿಂ ಮತ್ತು ಮುನೀರ್ ಎಂಬುವವರು ಈ ಅಕ್ರಮ ಜಾಲದ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದೆ. ಹೊಸಪೇಟೆಯ ಸಾಯಿಬಾಬಾ ಸರ್ಕಲ್ ಸಮೀಪದ ಲೇಔಟ್ ಒಂದರಲ್ಲಿ ಅಕ್ರಮವಾಗಿ ಮರಗಳನ್ನು ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ದೊಡ್ಡ ಪ್ರಮಾಣದ ತೇಗ ಹಾಗೂ ಸೀಸನ್ ಮರಮುಟ್ಟುಗಳು ಪತ್ತೆಯಾಗಿವೆ. ಇದನ್ನೂ ಓದಿ: ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ
ಈ ಅಕ್ರಮ ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಅಕ್ರಮ ಮರ ಸಾಗಾಟದ ವಿರುದ್ಧ ಅರಣ್ಯ ಇಲಾಖೆ ನಡೆಸಿರುವ ಈ ದಿಟ್ಟ ಕ್ರಮವು ಮರಗಳ್ಳರಲ್ಲಿ ನಡುಕ ಹುಟ್ಟಿಸಿದೆ.

