ಚಿಕ್ಕೋಡಿ: ಯಮಕನಮರಡಿ (Yamakanamaradi) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗೋವಾದಿಂದ (Goa) ಆಂಧ್ರಕ್ಕೆ (Andhra Pradesh) ಅಕ್ರಮ ಸಾಗಾಟ ಮಾಡುತ್ತಿದ್ದ ಮದ್ಯವನ್ನು (Alcohol) ವಶಕ್ಕೆ ಪಡೆದಿದ್ದಾರೆ.
16,848 ಲೀಟರ್ ಅಕ್ರಮ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಾರ್ಡ್‌ವೇರ್ ವಸ್ತು ಸಾಗಾಟ ಮಾಡುತ್ತೇವೆ ಎಂದು ಲೈಸೆನ್ಸ್ ಪಡೆದು ಹಾರ್ಡ್‌ವೇರ್ ಬದಲಿಗೆ ಗೋವಾದ ಅಕ್ರಮ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಒಟ್ಟು 28 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಳೆದ ಐದು ದಿನದಲ್ಲಿ ಧರೆಗುರುಳಿದ 271 ಮರ
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ಹಲಗೆ, ಸದಾಶಿವ ಗೇರಡೆ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ