ಚಿತ್ರದುರ್ಗ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ (Annabhagya Rice) ಕಳ್ಳಸಾಗಣೆ ಮಾಡುತ್ತಿದ್ದ ಲಾರಿಯನ್ನು ಚಿತ್ರದುರ್ಗದಲ್ಲಿ (Chitradurga) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ಉಪವಿಭಾಗಾಧಿಕಾರಿ ಎಸಿ ಮೆಹೆಬೂಬ್ ಜಿಲಾನಿ ನೇತೃತ್ವದ ತಂಡದಿಂದ ಲಾರಿ ಮೇಲೆ ದಾಳಿ ನಡೆದಿದೆ. ಸುಮಾರು 300ಕ್ಕೂ ಹೆಚ್ಚು ಚೀಲ ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಅಧಿಕಾರಿಗಳು 30ಟನ್‌ಗೂ ಅಧಿಕ ಅನ್ನಭಾಗ್ಯ ಅಕ್ಕಿ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸಿದ್ದರಾಮಯ್ಯ
ಅಕ್ಕಿಮತ್ತು ಲಾರಿಯನ್ನು ಚಿತ್ರದುರ್ಗ ನಗರ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಯಾದಗಿರಿ | ಅನ್ನಭಾಗ್ಯ ಅಕ್ಕಿ ಬಳಿಕ ಜೋಳ, ಅವಧಿ ಮೀರಿದ ಹಾಲಿನ ಪೌಡರ್ ಪ್ಯಾಕೆಟ್ ಸೇರಿ ಅಕ್ರಮ ಜಾಲ ಪತ್ತೆ

