ಟ್ವಿಟ್ಟರ್‌ ಖಾತೆ ಬ್ಲಾಕ್‌ ಆದೇಶ ರದ್ದು – ಕೆಜಿಎಫ್‌ ಹಾಡು ಬಳಸಿದ್ದ ಕಾಂಗ್ರೆಸ್‌ಗೆ ಬಿಗ್‌ ರಿಲೀಫ್‌

Public TV
3 Min Read
Bharat Jodo Yatra

ಬೆಂಗಳೂರು: ಕೆಜಿಎಫ್‌ ಚಿತ್ರದ ಹಾಡನ್ನು ಬಳಸಿದ್ದಕ್ಕೆ ಕಾಂಗ್ರೆಸ್‌ ಟ್ವಿಟ್ಟರ್‌(Congress Twitter) ಖಾತೆಯನ್ನು ಬ್ಲಾಕ್‌ ಮಾಡಬೇಕೆಂದು ಬೆಂಗಳೂರು ನಗರ ಜಿಲ್ಲಾ ವಾಣಿಜ್ಯ ಕೋರ್ಟ್‌ ನೀಡಿದ್ದ ಆದೇಶವನ್ನು ಹೈಕೋರ್ಟ್‌(High Court) ರದ್ದುಗೊಳಿಸಿದೆ. ಈ ಆದೇಶದಿಂದಾಗಿ ಕಾಂಗ್ರೆಸ್‌ಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಕೆಜಿಎಫ್‌(KGF) ಹಾಡನ್ನು ಬಳಕೆ ಮಾಡಿದ್ದ ಟ್ವೀಟ್‌ಗಳನ್ನು(Tweet) ತೆಗೆದು ಹಾಕಬೇಕೆಂದು ಹೈಕೋರ್ಟ್‌ ಕಾಂಗ್ರೆಸ್‌ಗೆ ಆದೇಶ ನೀಡಿದೆ.

CONGRESS 4

ಭಾರತ್‌ ಜೋಡೋ(Bharat Jodo) ಯಾತ್ರೆಯಲ್ಲಿ ಕೆಜಿಎಫ್‌ ಚಾಪ್ಟರ್‌ 2 ಚಿತ್ರದ ಹಾಡನ್ನು ಅನುಮತಿ ಇಲ್ಲದೇ ಕಾಂಗ್ರೆಸ್‌ ಬಳಸಿದೆ. ಕಾಪಿ ರೈಟ್‌ ಕಾಯ್ದೆಯನ್ನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಎಂಆರ್‌ಟಿ ಮ್ಯೂಸಿಕ್‌(MRT Music) ಸಂಸ್ಥೆಯ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರು ಕೋರ್ಟ್‌ ಕಾಂಗ್ರೆಸ್‌ ಮತ್ತು ಭಾರತ್‌ ಜೋಡೋ ಯಾತ್ರೆಯ ಟ್ವಿಟ್ಟರ್‌ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತು ಮಾಡುವಂತೆ ಟ್ವಿಟ್ಟರ್‌ ಕಂಪನಿಗೆ ಆದೇಶ ನೀಡಿತ್ತು.

ಈ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್‌ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇಂದು ನ್ಯಾ. ಜಿ. ನರೇಂದರ್‌ ಮತ್ತು ನ್ಯಾ.ಪಿಎನ್‌ ದೇಸಾಯಿ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು.

karnataka highcourt

ಕಾಂಗ್ರೆಸ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ನಮ್ಮ ಪ್ರತಿವಾದಿಗಳು ಸಂಪೂರ್ಣ ಟ್ವಿಟ್ಟರ್‌ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಆದರೆ 45 ಸೆಕೆಂಡಿನ ಆಡಿಯೋದಲ್ಲಿ ಮಾತ್ರ ಮ್ಯೂಸಿಕ್‌ ಬಳಕೆ ಮಾಡಲಾಗಿದೆ. ಮ್ಯೂಸಿಕ್‌ ಬಳಸಿ ನಾವು ತಪ್ಪು ಮಾಡಿದ್ದೇವೆ. ಕೆಜಿಎಫ್‌ ಮ್ಯೂಸಿಕ್‌ ಎಲ್ಲೆಲ್ಲಿ ಬಳಕೆ ಮಾಡಲಾಗಿದೆಯೋ ಅವೆಲ್ಲವನ್ನು ತೆಗೆದು ಹಾಕುತ್ತೇವೆ ಎಂದು ಮನವಿ ಮಾಡಿದರು.

Bharat Jodo Yatra rahul gandhi

ದೂರುದಾರರು ಸಂಪೂರ್ಣ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಇಲ್ಲಿ ಪ್ರತಿವಾದಿಯವರಿಗೆ ರಾಜಕೀಯ ಕುಮ್ಮಕ್ಕು ಇದೆಯೇ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ. ನಾವು ತಪ್ಪು ಮಾಡಿದ್ದೇವೆ. ಆದರೆ ಇದರಲ್ಲಿ ಯಾವುದೇ ವಾಣಿಜ್ಯ ಉದ್ದೇಶ ಇಲ್ಲ. ನಮ್ಮ ಅಭಿಪ್ರಾಯವನ್ನು ಆಲಿಸದೇ ಕೆಳ ನ್ಯಾಯಾಲಯ ಈ ರೀತಿಯ ಆದೇಶ ನೀಡಿದ್ದು ಎಷ್ಟು ಸರಿ? ದೇಶದ ದೊಡ್ಡ ರಾಜಕೀಯ ಪಕ್ಷದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವ್ಯಕ್ತಪಡಿಸುವ ಸಾಮಾಜಿಕ ಮಾಧ್ಯಮ ಧಮನಿಸುವುದಕ್ಕೆ ಕೋರ್ಟ್‌ ಅನುಮತಿ ನೀಡಬಾರದು ಎಂದು ಪ್ರಾರ್ಥಿಸಿದರು.

ಈ ವೇಳೆ ಎಂಆರ್‌ಟಿ ಸ್ಟುಡಿಯೋ ಪರ ವಕೀಲರಿಗೆ, ಈ ಪ್ರಕರಣದಲ್ಲಿ ಕಾಂಗ್ರೆಸ್‌ ಟ್ವಿಟ್ಟರ್‌ ಖಾತೆಯನ್ನು ತನಿಖೆ ಯಾಕೆ ಮಾಡಬೇಕು? ಆಯುಕ್ತರನ್ನು ಯಾಕೆ ನೇಮಿಸಬೇಕು? ಅವರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ತಪ್ಪನ್ನು ಒಪ್ಪಿಕೊಂಡ ಮೇಲೆ ತನಿಖೆ ಯಾಕೆ ಎಂದು ಪ್ರಶ್ನಿಸಿತು.

Bharat Jodo Yatra 1 3

ಅಭಿಷೇಕ್‌ ಮನು ಸಿಂಘ್ವಿ, ಬುಧವಾರ ಮಧ್ಯಾಹ್ನ 2 ಗಂಟೆಯ ಒಳಗಡೆ ಎಲ್ಲೆಲ್ಲಿ ಮ್ಯೂಸಿಕ್‌ ಬಳಕೆ ಮಾಡಿದ್ದೇವೋ ಅವುಗಳನ್ನು ತೆಗೆದು ಹಾಕುತ್ತೇವೆ. ಅರ್ಜಿದಾರ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಗೆ ದಾಖಲೆ ನೀಡುತ್ತೇವೆ ಎಂದು ತಿಳಿಸಿದರು. ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಕಾಪಿರೈಟ್‌ ಉಲ್ಲಂಘನೆ ಮಾಡಿದ ಎಲ್ಲಾ ಟ್ವೀಟ್‌ಗಳನ್ನು ತೆಗೆದು ಹಾಕುವಂತೆ ಆದೇಶಿಸಿತು. ಇದನ್ನೂ ಓದಿ: ಕೆಜಿಎಫ್‌ ಮ್ಯೂಸಿಕ್‌ ಬಳಕೆ – ಕಾಂಗ್ರೆಸ್‌ ಟ್ವಿಟ್ಟರ್‌ ಖಾತೆ ಬ್ಲಾಕ್‌ ಮಾಡುವಂತೆ ಕೋರ್ಟ್‌ ಆದೇಶ

ಏನಿದು ಪ್ರಕರಣ?: 
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಸ್ಥೆಯ ಅನುಮತಿ ಇಲ್ಲದೇ ಕೆಜಿಎಫ್‌ ಹಾಡನ್ನು ಭಾರತ್‌ ಜೋಡೋ ಯಾತ್ರೆಯಲ್ಲಿ ಬಳಸಿದೆ. ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವ MRT ಸಂಸ್ಥೆಯು ರಾಹುಲ್ ಗಾಂಧಿ (Rahul Gandhi), ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ (Jairam Ramesh) ವಿರುದ್ಧ ದೂರು ದಾಖಲಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿತ್ತು.

ಕೆಜಿಎಫ್‌ ಹಾಡನ್ನು ಕಾಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಾದ ಟ್ಟಿಟ್ಟರ್‌, ಯೂಟ್ಯೂಬ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬಳಸಲಾಗಿದೆ. ನಮ್ಮ ಸಂಸ್ಥೆಯ ಅನುಮತಿ ಪಡೆಯದೇ ಕಾಪಿರೈಟ್‌ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಸ್ಥೆ ಕೋರ್ಟ್‌ ಮೊರೆ ಹೋಗಿತ್ತು. ಇದನ್ನೂ ಓದಿ: ಬಿಜೆಪಿಯದ್ದು ಜನ ಸಂಕಲ್ಪ ಯಾತ್ರೆ ಅಲ್ಲ, ಅದು ಜನರ ಸಂಕಷ್ಟದ ಯಾತ್ರೆ : ಯು.ಟಿ.ಖಾದರ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *