ಯಾದಗಿರಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಗಳ ಮೇಲೆ ಪೊಲೀಸರು ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿಯಲ್ಲಿ ಈ ದಾಳಿ ನಡೆದಿದೆ. ಗುರಮಿಠಕಲ್‍ನಿಂದ ಮೂರು ಲಾರಿಗಳಲ್ಲಿ ಸರ್ಕಾರದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಲಾರಿ ಮೇಲೆ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್- ಕೊಡಗಿನಲ್ಲಿ ಬಿಜೆಪಿ, ಕಾಂಗ್ರೆಸ್ ಫೈಟ್
ಮೂರು ಲಾರಿಗಳಲ್ಲಿ 1,966 ಅಕ್ಕಿ ಚೀಲಗಳಿದ್ದು, ಒಟ್ಟು 983 ಕ್ವಿಂಟಾಲ್ ಪಡಿತರ ಅಕ್ಕಿ ಪತ್ತೆಯಾಗಿವೆ. ಇದರ ಮೌಲ್ಯ 21.62 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಲಿಸುತ್ತಿದ್ದಂತೆ ಹೊತ್ತಿ ಉರಿದ ರೈಲು