ಮೈಸೂರು: ಮೊದಲು 16 ಗೇಟ್‍ಗಳನ್ನು ರಿಪ್ಲೇಸ್ ಮಾಡಲಾಗಿದೆ. ಇವತ್ತಿಗೂ 61 ಗೇಟ್ ಬದಲಿಸಬೇಕಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೆಆರ್‌ಎಸ್ ಬಾಗಿನ ಕಾರ್ಯಕ್ರಮದ ವೇದಿಕೆಯಲ್ಲಿ ಬೊಮ್ಮಾಯಿ ಅವರು ಮಾತನಾಡಿದ್ದು, ಆಷಾಢದಲ್ಲಿ ಕಾವೇರಿ ಜಲಾನಯನದ 4 ಡ್ಯಾಂಗಳು ತುಂಬಿರುವುದು ಸಂತಸದ ವಿಷಯವಾಗಿದೆ. ಕಾವೇರಿ ಹಳೇ ಮೈಸೂರು ಭಾಗದ ಜೀವನದಿ. ಪವಿತ್ರವಾದ ನದಿಯ ಸದುಪಯೋಗ ಮಾಡಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಆಯ್ಕೆ
Advertisement
Advertisement
ಮೊದಲು 16 ಗೇಟ್‍ಗಳನ್ನು ರಿಪ್ಲೇಸ್ ಮಾಡಲಾಗಿದೆ. ಇವತ್ತಿಗೂ 61 ಗೇಟ್ ಬದಲಿಸಬೇಕಾಗಿದೆ. ಒಂದೂವರೆ ವರ್ಷದಲ್ಲಿ ಈ ಕಾಮಗಾರಿ ಮುಗಿಯಬೇಕು. ಗೇಟ್ ಕಾಮಗಾರಿಗೆ 160 ಕೋಟಿ ರೂ. ನೀಡಲಾಗಿದೆ. ಎಲ್ಲ ಗೇಟ್ ಬದಲಿಸಿದ ಬಳಿಕ ಕೆಆರ್‌ಎಸ್‍ನಲ್ಲಿ ದೊಡ್ಡ ಹಬ್ಬ ಮಾಡೋಣ ಎಂದು ವಿವರಿಸಿದರು. ಇದನ್ನೂ ಓದಿ: ಮೇಕೆದಾಟು ಆಣೆಕಟ್ಟು ನಿರ್ಮಾಣ ಯೋಜನೆ- ಜು. 26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
Advertisement
Advertisement
ಮೈಸೂರು ಮಹಾರಾಜರು ಡ್ಯಾಂ ಕಟ್ಟಲು ಮಾಡಿದ ತ್ಯಾಗ ಮರೆಯಲು ಸಾಧ್ಯವಿಲ್ಲ. 2008 ರಲ್ಲಿ ನಾನು ನೀರಾವರಿ ಸಚಿವನಾಗಿದ್ದಾಗ ಕೆಆರ್‌ಎಸ್ ಗೇಟ್ ರಂಧ್ರಗಳಾಗಿ ನೀರು ಸೋರುತ್ತಿತ್ತು. ಆ ಪರಿಸ್ಥಿತಿಯಲ್ಲಿ 300 ಕ್ಯೂಸೆಕ್ ನೀರು ಹರಿದು ಹೋಗುತ್ತಿತ್ತು. ಪ್ರತಿ ಹನಿಯನ್ನು ಉಳಿಸಿಕೊಳ್ಳಲು ಸಂಕಲ್ಪ ಮಾಡಿದ್ದೆವು. ಆ ಸಂದರ್ಭದಲ್ಲಿ ಗೇಟ್ ರಿಪೇರ್ ಮಾಡದಂತೆ ಒತ್ತಡಗಳು ಬಂತು. ಅವತ್ತು ರಾತ್ರಿ ನನಗೆ ನಿದ್ದೆ ಬರಲಿಲ್ಲ. ಮಾರನೇ ದಿನ ಬೆಳಗ್ಗೆ ಅಧಿಕಾರಿಗಳನ್ನ ಕರೆದು ಗೇಟ್ ಬದಲಿಸಲು ಹೇಳಿದೆ ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.