– ಈಡಿಗ ಸಂಘದ ಸಮಾವೇಶ ರಾಜಕೀಯ ಪ್ರೇರಿತ
ಹುಬ್ಬಳ್ಳಿ: ನಾನು ಬಾಲ್ ಇದ್ದಂತೆ, ತುಳಿದಷ್ಟು ಮೇಲೆ ಪುಟಿದೇಳುತ್ತೇನೆ. ಈಡಿಗ ಸಂಘದ ಸಮಾವೇಶ ರಾಜಕೀಯ ಪ್ರೇರಿತ, ನಾನು ಭಾಗಿಯಾಗಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ (Siddaramaiah) ಪರೋಕ್ಷವಾಗಿ ಬಿ.ಕೆ ಹರಿಪ್ರಸಾದ್ (BK Hariprasad) ಟಾಂಗ್ ನೀಡಿದ್ದಾರೆ.
Advertisement
ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಕಾರ್ಯವೈಖರಿ ಬಗ್ಗೆ ಜನಸಾಮಾನ್ಯರು ತೀರ್ಮಾನಿಸುತ್ತಾರೆ. ನನ್ನನ್ನು ತುಳಿಯಲು ಯಾರಿಂದಲೂ ಸಾಧ್ಯವಿಲ್ಲ. ತುಳಿದಷ್ಟು ಮೇಲೆ ಪುಟಿಯುತ್ತೇನೆ. ಬೆಂಗಳೂರಲ್ಲಿ ಈಡಿಗ ಸಮಾವೇಶ ನಡೆಯುತ್ತಿದೆ. ಇದು ರಾಜಕೀಯ ಪ್ರೇರಿತ ಮತ್ತು ರಾಜಕೀಯ ಎಂದರು. ಇದನ್ನೂ ಓದಿ: ಕಾರು ಅಡ್ಡಗಟ್ಟಿ 50 ಲಕ್ಷ ರೂ. ಹಣ ದೋಚಿದ ಕಿಡಿಗೇಡಿಗಳು
Advertisement
Advertisement
ಕುತಂತ್ರದಿಂದ ಸಮಾವೇಶ ಆಯೋಜನೆ ಮಾಡಲಾಗಿದೆ. ಸಿಎಂ, ಡಿಸಿಎಂ ಭಾಗಿಯಾಗುತ್ತಿದ್ದಾರೆ. ಆದರೆ ನಾನು ಈ ಸಮಾವೇಶಕ್ಕೆ ಹೋಗುತ್ತಿಲ್ಲ. ಈಡಿಗ, ಬಿಲ್ಲವ, ನಾಮಧಾರಿ ಮತ್ತು ದೀವರು ಸೇರಿ 26 ಒಳಪಂಗಡಗಳಿವೆ. ಈಡಿಗ ಸಮಾಜದಲ್ಲಿ ಸುಮಾರು 50 ಲಕ್ಷ ಜನಸಂಖ್ಯೆ ಇದೆ. ಆದರೆ ಈಡಿಗ ಸಂಘದಲ್ಲಿ ಇರುವುದು ಕೇವಲ 12 ಸಾವಿರ ಸದಸ್ಯತ್ವ. 75 ವರ್ಷಗಳ ಅಮೃತ ಮಹೋತ್ಸವ ಎಂದು ಹೇಳುತ್ತಾರೆ. ಬೆಳ್ಳಿ ಮತ್ತು ಸುವರ್ಣ ಮಹೋತ್ಸವ ಯಾವಾಗ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮದ್ಯಸೇವಿಸಿ ಕಾರ್ಯಕ್ರಮಕ್ಕೆ ಹೋಗ್ತಾರೆ, ನಮ್ಮನ್ನು ನಿರ್ಲಕ್ಷಿಸಿದ್ದಾರೆ – ಪಂಜಾಬ್ ಸಿಎಂ ವಿರುದ್ಧ ಪುತ್ರಿ ಕೆಂಡ
Advertisement
ಶೇಂದಿ, ಸಾರಾಯಿ ನಿಷೇಧ ಆದಾಗ ಈ ಸಂಘದಲ್ಲಿ ಇದ್ದವರು ಏನೂ ಮಾಡಲಿಲ್ಲ. ನಮ್ಮ ಸಮಾಜದಲ್ಲಿ ಆರು ಸ್ವಾಮೀಜಿಗಳಿದ್ದಾರೆ. ಈ ಪೈಕಿ ಇಬ್ಬರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಈ ಕಾರ್ಯಕ್ರಮಕ್ಕೆ ಹೋಗುತ್ತಿರುವ ಸಿಎಂ ಮತ್ತು ಡಿಸಿಎಂಗೆ ನಾನು ಶುಭ ಹಾರೈಸುತ್ತೇನೆ ಎಂದರು. ಇದನ್ನೂ ಓದಿ: ಮಿನಿ ಬಸ್‌ಗೆ ಕಾರು ಡಿಕ್ಕಿ – ಪ್ರೇಮಿಗಳ ದಾರುಣ ಸಾವು