ನವದೆಹಲಿ: ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಂಗಾಪುರಕ್ಕೆ ಭೇಟಿ ನೀಡಲು ಬಯಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಕೇಂದ್ರದ ಅನುಮತಿ ವಿಳಂಬವಾಗಿದೆ. ಇದರಿಂದ ಅಸಮಾಧಾನ ವ್ಯಕ್ತಪಡಿಸಿರುವ ಕೇಜ್ರಿವಾಲ್ ಇದರ ಹಿಂದೆ ರಾಜಕೀಯ ಕಾರಣವಿದೆ ಎಂದು ಆರೋಪಿಸಿದ್ದಾರೆ.
ನಾನು ಅಪರಾಧಿಯಲ್ಲ, ನಾನು ದೆಹಲಿಯ ಚುನಾಯಿತ ಮುಖ್ಯಮಂತ್ರಿ. ಸಿಂಗಾಪುರದಲ್ಲಿ ನಡೆಯುತ್ತಿರುವ ಜಾಗತಿಕ ಶೃಂಗಸಭೆಯಲ್ಲಿ ಭಾಗಿಯಾಗುವುದೇ ಒಂದು ಹೆಮ್ಮೆಯ ವಿಚಾರ. ಆದರೆ ಕೇಂದ್ರ ನನಗೆ ಸಿಂಗಾಪುರ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
Advertisement
“It’s not like I’m a criminal. I’m an elected CM of a state in the country.
It’s beyond my understanding why I’m being prohibited from visiting World Cities Summit, Singapore.
I think this visit would only bring more glory to India.”
— CM @ArvindKejriwal pic.twitter.com/Vg9TS4HSkI
— AAP (@AamAadmiParty) July 18, 2022
Advertisement
ಶೃಂಗಸಭೆಗೆ ಭೇಟಿ ನೀಡದಂತೆ ನನ್ನನ್ನು ಏಕೆ ತಡೆಯಲಾಗುತ್ತಿದೆ ಎಂಬುದು ನನ್ನ ತಿಳುವಳಿಕೆಯನ್ನೇ ಮೀರಿದ ವಿಚಾರ. ದೇಶದ ಆಂತರಿಕ ಭಿನ್ನಾಭಿಪ್ರಾಯಗಳು ಜಾಗತಿಕ ಮಟ್ಟದಲ್ಲಿ ಪ್ರತಿಬಿಂಬಿಸಬಾರದು. ಈ ಭೇಟಿ ಇಡೀ ದೇಶಕ್ಕೆ ಹೆಮ್ಮೆ ತಂದು ಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: 7,500 ಭಾರತೀಯ ಸೈನಿಕರಿಗೆ ಆಭರಣ ಸಂಸ್ಥೆಯಿಂದ ಉಂಗುರ ಗಿಫ್ಟ್
Advertisement
ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಶೃಂಗಸಭೆಗೆ ಆಹ್ವಾನಿಸಿದ್ದರು. ಈ ಬಗ್ಗೆ ಕೇಜ್ರಿವಾಲ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಭೇಟಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಆದರೆ ಅವರ ಭೇಟಿಗೆ ಇನ್ನೂ ಅನುಮತಿ ಸಿಕ್ಕಿಲ್ಲ.
Advertisement
ಜಾಗತಿಕ ಶೃಂಗಸಭೆಯಲ್ಲಿ ದೆಹಲಿ ಮಾದರಿಯನ್ನು ಪ್ರಸ್ತುತಪಡಿಸಲು ಸಿಂಗಾಪುರ ಸರ್ಕಾರ ನಮ್ಮನ್ನು ಆಹ್ವಾನಿಸಿದೆ. ಶೃಂಗಸಭೆಯಲ್ಲಿ ವಿಶ್ವದ ಅನೇಕ ದೊಡ್ಡ ನಾಯಕರ ಮುಂದೆ ದೆಹಲಿ ಮಾದರಿಯನ್ನು ಪ್ರಸ್ತುತಪಡಿಸಬೇಕಾಗಿದೆ. ಇಂದು ಇಡೀ ಜಗತ್ತು ದೆಹಲಿ ಮಾದರಿಯ ಬಗ್ಗೆ ತಿಳಿದುಕೊಳ್ಳಲು ಬಯಸುತ್ತದೆ. ಈ ಆಹ್ವಾನ ದೇಶಕ್ಕೆ ಹೆಮ್ಮೆ ಹಾಗೂ ಗೌರವದ ವಿಷಯವಾಗಿದೆ ಎಂದು ಕೇಜ್ರಿವಾಲ್ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ