
ಹಾಸನ: ಮಂತ್ರಿ, ಮುಖ್ಯಮಂತ್ರಿ ಯಾವುದನ್ನೂ ತಲೆಯಲ್ಲಿ ಇಟ್ಟುಕೊಂಡು ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದರು.
ವಿಜಯೇಂದ್ರ ಸಿಎಂ ಆಗಬೇಕು ಎಂಬ ಚರ್ಚೆಗೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಅವರು, ನಾನು ಯಡಿಯೂರಪ್ಪ ಅವರ ಮಗ ಇರಬಹುದು. ಆದರೆ ಇವತ್ತು ರಾಜ್ಯದಲ್ಲಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಗಿ ಕೆಲಸ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಭಾರೀ ಅಗ್ನಿ ಅವಘಡ – 90ಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ
ನಾನು ಪೂಜ್ಯ ಯಡಿಯೂರಪ್ಪ ಅವರ ಹೋರಾಟ, ಸಂಘಟನೆ ನೋಡಿದ್ದೇನೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಉಪಯೋಗಿಸಿಕೊಂಡು, ಸಂಘಟನೆಗೆ ಬಲ ತುಂಬುವ ಕೆಲಸ ಮಾಡುತ್ತೇನೆ. ಮುಂದೇನಾಗಬೇಕು, ಎಂಎಲ್‍ಎ ಆಗಬೇಕು, ಮಂತ್ರಿ ಆಗಬೇಕು, ಮುಖ್ಯಮಂತ್ರಿ ಆಗಬೇಕು ಎಂಬ ಪ್ರಶ್ನೆ ಉದ್ಭವಿಸಲ್ಲ ಎಂದು ತಿಳಿಸಿದರು.
ನಮ್ಮಕಣ್ಣ ಮುಂದೆ ಇರೋದು ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಎಲ್ಲ ಮುಖಂಡರು ಸೇರಿ ಕೆಲಸ ಮಾಡುತ್ತಿದ್ದೇವೆ. ಈ ಮಂತ್ರಿ, ಮುಖ್ಯಮಂತ್ರಿ ಯಾವುದನ್ನೂ ತಲೆಯಲ್ಲಿ ಇಟ್ಟುಕೊಂಡು ಕೆಲಸ ಮಾಡುತ್ತಿಲ್ಲ. ಭವಿಷ್ಯದ ಬಗ್ಗೆ ನಾನು ಬಹಳ ತಲೆಕೆಡಿಸಿಕೊಂಡಿಲ್ಲ. ನಾನು ಮುಂದೆ ಏನು ಆಗಬೇಕು ಎಂದು ಪಕ್ಷ ನಿರ್ಧಾರ ಮಾಡುತ್ತೆ. ಕಾರ್ಯಕರ್ತರು ನಿರ್ಧಾರ ಮಾಡುತ್ತಾರೆ ಎಂದು ಸ್ಪಷ್ಟನೆ ಕೊಟ್ಟರು.