-SITಯಿಂದ ಬಂಧನಕ್ಕೊಳಗಾಗಿದ್ದ ವಿಜಯ್ ಶಂಕರ್
ಬೆಂಗಳೂರು: ಐಎಂಎ ಹಗರಣ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
2019 ಜುಲೈ 8ರಂದು ಎಸ್‍ಐಟಿ ಲಂಚ ಪಡೆದ ಆರೋಪದಲ್ಲಿ ವಿಜಯ್ ಶಂಕರ್ ಅವರನ್ನ ಬಂಧಿಸಿತ್ತು. ಇದಕ್ಕೂ ಮೊದಲ ಬಂಧನಕ್ಕೊಳಗಾಗಿದ್ದ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಹೇಳಿಕೆ ಆಧಾರದ ಮೇಲೆ ಬಂಧಿಸಲಾಗಿತ್ತು.
ಪ್ರಕರಣದಲ್ಲಿ ಜಾಮೀನು ಪಡೆದ ವಿಜಯ್ ಶಂಕರ್ ಹೊರ ಬಂಧಿದ್ದರು. ಇದೀಗ ಜಯನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಂಗಳೂರಿನ ಜಿಲ್ಲಾಧಿಕಾರಿಯಾಗಿದ್ದ ವಿಜಯ್ ಶಂಕರ್ ಹೆಸರು ಐಎಂಎ ಹಗರಣದಲ್ಲಿ ಕೇಳಿ ಬಂದಿತ್ತು.