ಬೆಂಗಳೂರು: 50 ಸಾವಿರಕ್ಕೂ ಹೆಚ್ಚು ಪಾಲುದಾರರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಐಎಂಎ ಕಿಂಗ್ ಪಿನ್ ಮನ್ಸೂರ್ ಅಲಿ ಖಾನ್‍ನನ್ನು 3 ದಿನಗಳ ಅವಧಿಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.
ದೆಹಲಿಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಮನ್ಸೂರ್‍ನನ್ನು ಬಂಧಿಸಲಾಗಿತ್ತು. ಇವತ್ತು ಬೆಂಗಳೂರಿನ ಶಾಂತಿ ನಗರದಲ್ಲಿರುವ ಇ.ಡಿ. ಕಚೇರಿಗೆ ಕರೆತಂದಿದ್ದರು. ಬಳಿಕ ಸಿವಿಲ್ ಕೋರ್ಟ್‍ಗೆ ಹಾಜರುಪಡಿಸಿದ್ದರು. ಹಲವು ವಿಷಯಗಳ ಕುರಿತು ವಿಚಾರಣೆ ನಡೆಸಬೇಕಿದೆ. ಆದ್ದರಿಂದ 15 ದಿನಗಳ ಕಾಲ ವಶಕ್ಕೆ ನೀಡಿ ಅಂತ ಇಡಿ ಕೇಳಿತು. ಆದರೆ, ಕೇವಲ 3 ದಿನಗಳಿಗೆ ಮಾತ್ರ ನೀಡೋದಾಗಿ ಜರ್ಡ್ ಆದೇಶಿಸಿದರು.
ಐಎಂಎ ಕಚೇರಿ ಸೇರಿದಂತೆ ಮನ್ಸೂರ್ ಖಾನ್ ಮನೆ ಮೇಲೆ ದಾಳಿ ನಡೆಸಿದ ವೇಳೆ ಲಭ್ಯವಾದ ಆಸ್ತಿಪಾಸ್ತಿ, ಚಿನ್ನಾಭರಣಗಳು, ದಾಖಲೆಗಳ ಕುರಿತು ಇ.ಡಿ. ವಿಚಾರಣೆ ನಡೆಸಲಿದೆ. ಇನ್ನೊಂದೆಡೆ, ಎಸ್‍ಐಟಿ ಹಾಗೂ ತೆಲಂಗಾಣ ಪೊಲೀಸರು ಕೂಡ ಮನ್ಸೂರ್ ನನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.