ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಚಳಿಯ ಅಬ್ಬರ ಜೋರಾಗಿದೆ. ಪ್ರತಿವರ್ಷದ ವಾಡಿಕೆ ಪ್ರಮಾಣಕ್ಕಿಂತಲೂ ಈ ಬಾರಿ ಹೆಚ್ಚು ಚಳಿ (Cold Wave) ಅಬ್ಬರಿಸುತ್ತಿದ್ದು ಮುಂದಿನ ಹಲವು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ.
Advertisement
ಇದರ ಮಧ್ಯ ಶೀತಗಾಳಿಯ ಎಚ್ಚರಿಕೆ ಸಹ ನೀಡಲಾಗಿದ್ದು ದಕ್ಷಿಣ ಒಳನಾಡು, ಮತ್ತು ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಮತ್ತಷ್ಟು ಚಳಿ ಹೆಚ್ಚಾಗುವ ಸಾಧ್ಯತೆ ಇದೆ. ಭಾನುವಾರದಿಂದ 6 ದಿನಗಳ ಕಾಲ ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ (Bengaluru) ಜ.15 ರಿಂದ 19 ರವರೆಗೆ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ
Advertisement
Advertisement
ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮುಂತಾದೆಡೆ ಶೀತ ಗಾಳಿ ಹೆಚ್ಚಾಗಲಿದೆ. ಹಾಗೇ, ಉತ್ತರ ಕರ್ನಾಟಕದಲ್ಲಿ ಕೂಡ ಚಳಿ ಹೆಚ್ಚಾಗುತ್ತಲೇ ಇದೆ. ಕರ್ನಾಟಕದ ಕೆಲವು ಭಾಗಗಳಲ್ಲಿ, ಶೀತ ಅಲೆಗಳ ಪರಿಸ್ಥಿತಿ ಇರುತ್ತದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಬಾಗಲಕೋಟೆ, ವಿಜಯಪುರದಲ್ಲಿ ಭಾರೀ ಚಳಿ ಶುರುವಾಗಿದೆ. ಉತ್ತರ ಕರ್ನಾಟಕದ ಬೀದರ್, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಶೀತ ಅಲೆಯ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಲಿದೆ ಸಂಕ್ರಾಂತಿ ಸೂರ್ಯ ರಶ್ಮಿ..!
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k