ಬೆಂಗಳೂರು: ರಾಜ್ಯದಲ್ಲಿ ಚಳಿಯ (Cold Weather) ಅಬ್ಬರ ಮತ್ತಷ್ಟು ಜೋರಾಗಿದೆ. ದಿನ ಕಳೆದಂತೆ ಕನಿಷ್ಠ ತಾಪಮಾನ ಮತ್ತಷ್ಟು ಕುಸಿತ ಕಂಡಿದ್ದು, ಉತ್ತರ ಕರ್ನಾಟಕ (North Karnataka) ಅಕ್ಷರಶಃ ಚಳಿಗೆ ತತ್ತರಿಸಿದೆ.
ಉತ್ತರ ಕರ್ನಾಟಕದ ಬಾಗಲಕೋಟೆಯಲ್ಲಿ (Bagalkote) ಮಂಗಳವಾರ ಅತಿ ಕಡಿಮೆ 6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಬುಧವಾರ ಕೂಡ ಅದೇ ಪರಿಸ್ಥಿತಿ ಮುಂದುವರೆದಿದೆ. ಅಲ್ಲದೆ ಮುಂದಿನ 24 ಗಂಟೆಗಳು ಉತ್ತರ ಕರ್ನಾಟಕದ ಬೀದರ್, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಗೆ ಶೀತ ಮಾರುತಗಳು ಹೆಚ್ಚಾಗುವ (Cold Wave Warning) ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ಮುಂದಿನ 24 ಗಂಟೆ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಸಾಮಾನ್ಯಕ್ಕಿಂತ 6 ರಿಂದ 7 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್: ಡಿಕೆಶಿ ಘೋಷಣೆ
Advertisement
Advertisement
ರಾಜ್ಯದ ಇತರ ಭಾಗಗಳಲ್ಲೂ 3 ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ಬೆಂಗಳೂರಲ್ಲೂ ಕೂಡ ಚಳಿಯ ಅಬ್ಬರ ಕೊಂಚ ಜೋರಾಗಿಯೇ ಇದೆ. ಬೆಂಗಳೂರಲ್ಲಿ 13 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆ ಕಂಡಿದೆ. ಸೋಮವಾರ ನಗರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗಿತ್ತು.
Advertisement
ಬುಧವಾರ ಮತ್ತೆ ಉಷ್ಣಾಂಶ ಇಳಿಕೆ ಕಂಡಿದ್ದು ಮುಂದಿನ 48 ಗಂಟೆಗಳ ಕಾಲ ಇದೆ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದ್ದು, ನಗರದ ಕೆಲ ಕಡೆ ದಟ್ಟ ಮಂಜು ಆವರಿಸುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k