ಬೆಂಗಳೂರು: ನಗರ ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆ.ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಮುಂದಿನ 5 ದಿನ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಒಂದೇ ಶಬ್ದದಲ್ಲಿ ಹೇಳ್ತೀನಿ, ನನ್ನ ಶಕ್ತಿ ಶಿವ: ರಾಹುಲ್ ಗಾಂಧಿ ಹೇಳಿದ ಗುಟ್ಟುಗಳು
Advertisement
Advertisement
ಹವಾಮಾನ ಇಲಾಖೆ ಎಚ್ಚರಿಕೆ ಬೆನ್ನಲ್ಲೇ ಗುರುವಾರ ರಾತ್ರಿ ಬೆಂಗಳೂರು ನಗರ ದಾವಣಗೆರೆ, ಹಾಸನ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ವರುಣ ಆರ್ಭಟಿಸಿದ್ದಾನೆ. ದಾವಣಗೆರೆಯ ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮ ಜಲಾವೃತಗೊಂಡಿದ್ದು, ಕೆರೆಗಳ ಕೋಡಿ ಬಿದ್ದು ಮನೆ ಹಾಗೂ ತೋಟಕ್ಕೆ ನೀರು ನುಗ್ಗಿದೆ. ಹಾಸನ ಜಿಲ್ಲೆಯ ವಿವಿಧೆಡೆ ವರುಣನ ಅಬ್ಬರ ಜೋರಾಗಿದೆ. ಹಾಸನ ನಗರ ಸೇರಿದಂತೆ ಹಲವೆಡೆ ಭಾರೀ ಮಳೆ ಆಗುತ್ತಿದೆ. ಭಾರೀ ಮಳೆಗೆ ವಾಹನ ಸವಾರರ ಪರದಾಡ್ತಿದ್ದಾರೆ. ಮಿಂಚು, ಗುಡುಗು ಸಹಿತ ಜೋರಾಗಿ ಮಳೆ ಸುರಿಯುತ್ತಿದೆ. ಇದನ್ನೂ ಓದಿ: ಶಾಸಕ ಉದಯ್ ಗರುಡಾಚಾರ್‌ಗೆ ಜೈಲು ಶಿಕ್ಷೆ- ಅದೇ ಕೋರ್ಟ್‍ನಿಂದ ಜಾಮೀನು