ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ನಿಧಾನವಾಗಿ ಇಳಿಕೆಯಾಗುತ್ತಿದೆ. ಕರಾವಳಿಗೆ ಇಂದಿನಿಂದ ಮೂರು ದಿನ ಆರೆಂಜ್ ಅಲರ್ಟ್ ಜಾರಿಯಾಗಲಿದೆ.
ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ನೀಡಲಾಗಿತ್ತು. ಆದರೆ ಎರಡು ದಿನಗಳಿಂದ ಮಳೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಿದೆ.
Advertisement
ಕರಾವಳಿಗೆ ಇಂದಿನಿಂದ ಮೂರು ದಿನ ಆರೆಂಜ್ ಅಲರ್ಟ್ ಇದ್ದರೆ ಕೊನೆಯ ಎರಡು ದಿನ ಯಲ್ಲೋ ಅಲರ್ಟ್ ಇರಲಿದೆ. ಇಂದು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.
Advertisement
ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ, ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ರಾಜ್ಯದ ಯಾವ ಜಿಲ್ಲೆಗಳಿಗೂ ಯಾವುದೇ ಅಲರ್ಟ್ ಇಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Advertisement
ರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 45-55 ಕಿ.ಮೀ. ಇರಲಿದ್ದು, 65 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.