ಬೆಂಗಳೂರು: ಮುಂದಿನ 5 ದಿನ ರಾಜ್ಯದ (Karnataka) ಹಲವು ಭಾಗಗಳಲ್ಲಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಬೆಂಗಳೂರಿನಲ್ಲಿ (Bengaluru) ಸದ್ಯ ಈಗ ಒಂದು ದಿನ ಭಾರೀ ಬಿಸಿಲು ಇದ್ದರೆ ಮತ್ತೊಂದು ದಿನ ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಮುಂದುವರಿದಿದೆ. ಇದನ್ನೂ ಓದಿ: ಚುನಾವಣೆ ಸಮಯದಲ್ಲೇ ಇಡಿಯಿಂದ ದೊಡ್ಡ ಬೇಟೆ – ಕಂತೆ ಕಂತೆ ನೋಟು ಪತ್ತೆ
ಮೇ 6 ರಿಂದ ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಮೇ 6ರಂದು ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದರೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ – ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ!
ಬೆಂಗಳೂರಿನಲ್ಲಿ ಇಂದು ಸಂಜೆ ಸಾಧಾರಣ ಮಳೆಯಾಗಲಿದೆ. ಮೇ 7ರಂದು ನಗರದಲ್ಲಿ ಗುಡುಗು ಮಿಂಚಿನೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.