ಬೆಂಗಳೂರು: ರಾಜ್ಯದಲ್ಲಿ (Karnataka) ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ (Rain) ಸಾಧ್ಯತೆಯಿದೆ.
ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
Advertisement
Advertisement
ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆಯಿದೆ. ಇದನ್ನೂ ಓದಿ: ಸಿಎಂ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?
Advertisement
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Advertisement