ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಇಂದಿನಿಂದ 3 ದಿನ ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ.
Advertisement
Advertisement
ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲೂ ಮಳೆ ಹೆಚ್ಚಾಗಿದೆ. ಇಂದು ಸಂಜೆ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಒಂದು ಕೇಸ್ ಪತ್ತೆ- ಮೂರು ದಿನ ನ್ಯೂಜಿಲೆಂಡ್ ಲಾಕ್‍ಡೌನ್
Advertisement
ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.
Advertisement
ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಕೈ ನಾಯಕರಿಗೆ ಸಿ.ಟಿ. ರವಿ ಪ್ರತ್ಯುತ್ತರ – ಮಾನನಷ್ಟ ಮೊಕದ್ದಮೆ ಎಚ್ಚರಿಕೆ