ಮಂಗಳೂರು: ಎರಡು ವಾರಗಳ ಹಿಂದೆ ವದಂತಿ ನಂಬಿ ಮುಂಬೈನಲ್ಲಿ ಸಾವಿರಾರು ವಲಸೆ ಕಾರ್ಮಿಕರು ರೈಲ್ವೇ ಸ್ಟೇಷನ್‍ಗೆ ಬಂದಿದ್ದರು. ಆ ವೇಳೆ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹೆಣಗಾಡಿದರು. ಇಂತದ್ದೆ ಸನ್ನಿವೇಶ ಇಂದು ಮಂಗಳೂರಿನಲ್ಲಿ ಕಂಡು ಬಂತು.
ಜಿಲ್ಲಾಡಳಿತ ತಮ್ಮನ್ನು ಸ್ವಗ್ರಾಮಗಳಿಗೆ ಕಳಿಸಲಿದೆ ಎಂಬ ವದಂತಿ ನಂಬಿದ ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮಂಗಳೂರಿನ ಟೌನ್‍ಹಾಲ್‍ನಲ್ಲಿ ಕಾಣಿಸಿಕೊಂಡರು. ಸಾಮಾಜಿಕ ಅಂತರಪಾಲಿಸದೆ ಗುಂಪು ಸೇರಿದ್ದರು. ಇದು ವದಂತಿ ಹೋಗಿ ಎಂದರೂ ಯಾರೂ ಕೇಳಲಿಲ್ಲ.
Advertisement
Advertisement
ಕಾರ್ಮಿಕರು ಊರಿಗೆ ಹೋಗಲು ಜಿಲ್ಲಾಡಳಿತ ವ್ಯವಸ್ಥೆ ಮಾಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ದುಡಿಯುತ್ತಿದ್ದ ಸುಮಾರು 1 ಸಾವಿರಕ್ಕೂ ಅಧಿಕ ಕೂಲಿ ಕಾರ್ಮಿಕರು ಬಂದು ಸೇರಿದ್ದರು. ಕೆಲ ಕಾರ್ಮಿಕರು ಊರಿಗೆ ಹೋಗಲು ಜಿಲ್ಲಾಡಳಿತ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದರು.
Advertisement
ಬಹುತೇಕರು ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರಾಗಿದ್ದು, ಕಳೆದ ಎರಡು ದಿನಗಳಲ್ಲಿ 60 ಬಸ್ ಗಳಲ್ಲಿ 780 ಕಾರ್ಮಿಕರನ್ನು ಕಳುಹಿಸಲಾಗಿತ್ತು. ಹೀಗಾಗಿ ಇನ್ನುಳಿದ ಕಾರ್ಮಿಕರು ತಮ್ಮ ತಮ್ಮ ಊರಿಗೆ ಹೋಗಲೆಂದು ಜಿಲ್ಲಾಡಳಿತದ ನೆರವಿಗಾಗಿ ಕಾಯುತ್ತಿದ್ದಾರೆ. ಬಳಿಕ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಕೊನೆಗೂ ಕಾರ್ಮಿಕರ ಮನವಿಗೆ ಸ್ಪಂಧಿಸಿದ ಜಿಲ್ಲಾಡಳಿತ ಕಾರ್ಮಿಕರನ್ನು ಊರಿಗೆ ಕಳುಹಿಸಲು ಸಿದ್ಧತೆ ನಡೆಸುತ್ತಿದೆ.