ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಗ್ಗಿಲ್ಲದೇ ಅಕ್ರಮ ಗ್ಯಾಸ್ ಮಾಫಿಯಾ ಯಾವ ಭಯವೂ ಇಲ್ಲದೆ ರಾಜರೋಷವಾಗಿ ನಡೆಯುತ್ತಿತ್ತು. ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ತಂಡ ರಹಸ್ಯ ಕಾರ್ಯಾಚರಣೆ ಮೂಲಕ ಹೇಗೆ ಗ್ಯಾಸ್ ಸಿಲಿಂಡರ್ ಗಳನ್ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಅನ್ನೋದನ್ನ ತಿಳಿಯೋ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿತ್ತು.

ವರದಿ ಮಾಡಲು ಬಂದಿರೋ ವಿಚಾರ ತಿಳಿದ ಬಗಲಗುಂಟೆ ಪೊಲೀಸರು ಅಕ್ರಮವಾಗಿ ಗ್ಯಾಸ್ ದಂಧೆ ಮಾಡುತ್ತಿದ್ದವರನ್ನ ಬಂಧಿಸಿದ್ದಾರೆ. ಅಲ್ಲದೆ ಗ್ಯಾಸ್ ಸಿಲಿಂಡರ್, ಆಟೋ, ಹಾಗೂ ಅಂಗಡಿಯನ್ನ ಸಿಝ್ ಮಾಡಿ ಅಕ್ರಮ ಗ್ಯಾಸ್ ದಂಧೆಗೆ ಕಡಿವಾಣ ಹಾಕಿದ್ದಾರೆ.


