ನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ(Lok Sabha Seat) ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಸವಾಲು ಎಸೆದಿದ್ದಾರೆ.
ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ ಬೆನ್ನಲ್ಲೇ ಎಕ್ಸ್‌ನಲ್ಲಿ ಖರ್ಗೆ ಅವರು ದೀರ್ಘ ಪೋಸ್ಟ್ ಮಾಡಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ
ದೇಶವನ್ನು ಉದ್ದೇಶಿಸಿ ಮಾಡುವ ಅಧಿಕೃತ ಭಾಷಣವನ್ನು ಮೋದಿ ಅವರು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಸರ್ಕಾರವು ಮಹಿಳಾ ಮೀಸಲಾತಿ ಮಸೂತೆ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗಳನ್ನು ಒಟ್ಟಿಗೆ ಸೇರಿಸಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ದೂರಿದರು. ಇದನ್ನೂ ಓದಿ: ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ
A desperate and frustrated PM @narendramodi with nothing meaningful to show for the last 12 years, turned an official address to the nation, into a political speech, full of mudslinging, and outright LIES. The Model Code of Conduct is already in place and it was very clear how PM…
— Mallikarjun Kharge (@kharge) April 18, 2026
ಕ್ಷೇತ್ರ ಮರುವಿಂಗಡಣೆಯ ಹೆಸರಿನಲ್ಲಿ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಲು ಮೋದಿ-ಶಾ ಜೋಡಿ ಯತ್ನಿಸುತ್ತಿದೆ. ಆದರೆ ಒಗ್ಗಟ್ಟಿನ ವಿರೋಧ ಪಕ್ಷಗಳ ಹೋರಾಟದಿಂದಾಗಿ ಸಂವಿಧಾನ ತಿದ್ದುಪಡಿ ವಿಧೇಯಕ ಬಿದ್ದುಹೋಗಿದೆ ಎಂದು INDIA ಒಕ್ಕೂಟದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ
ಕಾಂಗ್ರೆಸ್ ಯಾವಾಗಲೂ ಸುಧಾರಣೆಯ ಪರವಾಗಿದೆ. ಹಸಿರು ಕ್ರಾಂತಿಯ ಮೂಲಕ ಕಾಂಗ್ರೆಸ್ ಭಾರತೀಯ ಕೃಷಿಯನ್ನು ಪರಿವರ್ತಿಸಿತು, ಶ್ವೇತ ಕ್ರಾಂತಿಯ ಮೂಲಕ ಡೈರಿ ಅಭಿವೃದ್ಧಿಯನ್ನು ಬಲಪಡಿಸಿತು, ನಮ್ಮ ಬಾಹ್ಯಾಕಾಶ ವಲಯವನ್ನು ಸೃಷ್ಟಿಸಿತು, ಭಾರತವನ್ನು ಪರಮಾಣು ಶಕ್ತಿಯಾಗಿ ಮಾಡಿತು, 1991 ರಲ್ಲಿ ಆರ್ಥಿಕತೆಯನ್ನು ಉದಾರೀಕರಣಗೊಳಿಸಿತು. ಮೋದಿ ಅವರು ಅಧಿಕಾರ ವಹಿಸಿಕೊಳ್ಳುವ ಮೊದಲು 60 ಕೋಟಿ ಆಧಾರ್ ಕಾರ್ಡ್‌ಗಳನ್ನು ವಿತರಿಸಲಾಯಿತು. ಕಾಂಗ್ರೆಸ್ ಆರ್‌ಟಿಇ, ಆಹಾರ ಭದ್ರತಾ ಕಾಯ್ದೆ, ನರೇಗಾವನ್ನು ತಂದಿದೆ. ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಕ್ಕೆ ಮೋದಿ ಅವರು 140 ಕೋಟಿ ಜನರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

