ಬೆಂಗಳೂರು: ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸರ್ಕಾರ ಹೊಸ ಪ್ಲ್ಯಾನ್ ಮಾಡಿದೆ. ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರಿ ಶಾಲಾ-ಕಾಲೇಜುಗಳ ಗುಣಮಟ್ಟದ ಶಿಕ್ಷಣ ಹೆಚ್ಚಿಸುವ ಜವಾಬ್ದಾರಿಯನ್ನ ಶಿಕ್ಷಣ ಇಲಾಖೆ ನೀಡಿದೆ.
ಸರ್ಕಾರಿ ಶಾಲಾ-ಕಾಲೇಜುಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ದತ್ತು ಕಾರ್ಯಕ್ರಮ ತಮ್ಮ ಭಾಗದ ಸರ್ಕಾರಿ ಶಾಲಾ-ಕಾಲೇಜುಗಳನ್ನ ಅಧಿಕಾರಿಗಳು ದತ್ತು ಪಡೆದು ಶೈಕ್ಷಣಿಕ ಗುಣಮಟ್ಟವನ್ನ ಹೆಚ್ಚಿಸುವ ಕಾರ್ಯಕ್ರಮ ಇದಾಗಿದೆ. ರಾಜ್ಯ, ಜಿಲ್ಲಾಮಟ್ಟದಿಂದ ತಾಲೂಕು ಮಟ್ಟದ ಎಲ್ಲ ಹಂತದ ಅಧಿಕಾರಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದೇ ಶೈಕ್ಷಣಿಕ ದತ್ತು ಕಾರ್ಯಕ್ರಮವಾಗಿದೆ. ಇದನ್ನೂ ಓದಿ: ಇತ್ತೀಚೆಗೆ ನಡೆಯುತ್ತಿರುವ ಕ್ಷುಲ್ಲಕ ಚರ್ಚೆ ನನ್ನನ್ನು ತಲೆ ತಗ್ಗಿಸುವಂತೆ ಮಾಡುತ್ತಿದೆ: ಮಸ್ಕ್
Advertisement
Advertisement
ಏನಿದು ಶೈಕ್ಷಣಿಕ ದತ್ತು ಕಾರ್ಯಕ್ರಮ?
ಶಾಲಾ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ ಸರ್ಕಾರದ ಎಲ್ಲ ಇಲಾಖೆಗಳ ರಾಜ್ಯ, ಜಿಲ್ಲಾ ಮತ್ತು ತಾಲೂಕು ಹಂತದ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಸೇರಿದ ಒಂದು ಸರ್ಕಾರಿ, ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ-ಪೂರ್ವ ಕಾಲೇಜನ್ನು ದತ್ತು ಪಡೆಯುವುದು.
Advertisement
ತಮ್ಮ ಕೆಲಸದ ಸ್ಥಳದಲ್ಲಿ ಸ್ಥಳೀಯವಾಗಿ ಇರುವ ಶಾಲಾ-ಕಾಲೇಜುಗಳನ್ನು ದತ್ತು ಪಡೆಯುವುದು. ಅಧಿಕಾರಿಗಳು ತಾವು ದತ್ತು ಪಡೆದ ಶಾಲೆ, ಕಾಲೇಜಿಗೆ ತಿಂಗಳಿಗೆ ಕನಿಷ್ಟ ಒಂದು ಅಥವಾ ಎರಡು ಬಾರಿ ಭೇಟಿ ನೀಡುವುದು. ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗಳ ಶೈಕ್ಷಣಿಕ ಪ್ರಗತಿಯನ್ನು ಅವಲೋಕಿಸಿ, ಸಲಹೆ, ಮಾರ್ಗದರ್ಶನ ನೀಡುವುದು.
Advertisement
ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸುವುದು, ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಗಳನ್ನು ನಿಗದಿಪಡಿಸಿಕೊಂಡು, ಅವುಗಳನ್ನು ಸಾಧಿಸಲು ಪ್ರೇರಣೆ ನೀಡುವುದು, ಅಧಿಕಾರಿಗಳು ತಮ್ಮ ವೃತ್ತಿಯ ಬಗ್ಗೆ ಮಾಹಿತಿ, ಅನುಭವಗಳನ್ನು ಹಂಚಿಕೊಳ್ಳುವುದು.
ಪ್ರಾಂಶುಪಾಲರು, ಶಿಕ್ಷಕರ ಜೊತೆ ಸಂವಾದ ನಡೆಸಿ, ಶಾಲೆ ಕೈಗೊಳ್ಳುತ್ತಿರುವ ಉತ್ತಮ ಕಾರ್ಯಗಳ ಮಾಹಿತಿ ಪಡೆದು, ಅಗತ್ಯವಾದ ಮಾರ್ಗದರ್ಶನ, ಪ್ರೇರಣೆ ನೀಡುವುದು. ಶಾಲೆ, ಕಾಲೇಜಿನ ಕುಂದು-ಕೊರತೆಗಳನ್ನು ಸಾವಧಾನದಿಂದ ಆಲಿಸಿ, ಗಮನಿಸಿ, ಅವುಗಳ ನಿವಾರಣೆಗೆ ಸರ್ಕಾರ ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಪ್ರೇಮಿಗಳು, ದಾನಿಗಳ ನೆರವಿನಿಂದ ಅಗತ್ಯ ಕ್ರಮ ಕೈಗೊಳ್ಳುವುದು.
ಅಧಿಕಾರಿಗಳ ಶಾಲಾ ಭೇಟಿಯು ಸೌಹಾರ್ದಯುತ ಮತ್ತು ಪ್ರೇರಣಾದಾಯಕವಾಗಿ ಇರಬೇಕು. ದತ್ತು ಪಡೆದ ಶಾಲಾ-ಕಾಲೇಜುಗಳಲ್ಲಿ ಶೈಕ್ಷಣಿಕ ಗುಣಮಟ್ಟದ ವೃದ್ಧಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಅಧಿಕಾರಿಗಳು ನಡೆಸಬೇಕು. ದತ್ತು ಪಡೆದವರು ಶಾಲೆಯಲ್ಲಿ ಮೂಲ ಸೌಕರ್ಯಗಳು ಸರಿಯಾಗಿ ಬಳಕೆ ಆಗುತ್ತಿದೆಯಾ ಎಂದು ಪರಿಶೀಲಿಸಿ ಮುಖ್ಯ ಶಿಕ್ಷಕರಿಗೆ ಸಲಹೆ, ಸೂಚನೆಗಳನ್ನು ಕೊಡಬಹುದು.
ವಿದ್ಯಾರ್ಥಿಗಳ ಸಾಮಥ್ರ್ಯ ವೃದ್ಧಿ ಚಟುವಟಿಕೆಗಳಿಗೆ ಶಿಕ್ಷಕರಿಗೆ ಅಗತ್ಯ ಮಾರ್ಗದರ್ಶನ ನೀಡುವುದು. ಕಲಿಕಾ ಪೂರಕ ಚಟುವಟಿಕೆಗಳಿಗೆ ಅಗತ್ಯವಾದ ಸಲಹೆ, ಮಾರ್ಗದರ್ಶನ ನೀಡುವುದು. ಅಕ್ಷರ ದಾಸೋಹದ ಕಾರ್ಯಕ್ರಮವನ್ನ ಸಮರ್ಪಕವಾಗಿ ಅನುಷ್ಠಾನಕ್ಕೆ ಮುಖ್ಯ ಶಿಕ್ಷಕರಿಗೆ ಸಲಹೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು, ಅಪರ ಆಯುಕ್ತರು, ಧಾರವಾಡ, ಅಪರ ಆಯುಕ್ತರು, ಕಲಬುರಗಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಕ್ತ ಸಮನ್ವಯದಿಂದ ರಾಜ್ಯ ವಿಭಾಗ ಹಂತದ ಎಲ್ಲ ಕಛೇರಿಗಳ ಅಧಿಕಾರಿಗಳಿಗೆ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು, ಶೈಕ್ಷಣಿಕ ಕಮತ್ತು ಕಾರ್ಯಕ್ರಮಕ್ಕೆ ಹಂಚಿಕೆ ಮಾಡುವುದು.
ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಪನಿರ್ದೇಶಕರು, ಪದವಿ-ಪೂರ್ವ ಶಿಕ್ಷಣ ಇಲಾಖೆ ಅವರು ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಇತರೆ ಇಲಾಖೆಗಳ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ಜಿಲ್ಲಾ ಹಂತದಲ್ಲಿ ಶೈಕ್ಷಣಿಕ ದತ್ತು ಯೋಜನೆಗೆ ಶಾಲೆಗಳ ಹಂಚಿಕೆಯ ಜವಾಬ್ದಾರಿ ಹೊಂದಿರುವ ನೋಡಲ್ ಅಧಿಕಾರಿಯಾಗಿರುತ್ತಾರೆ. ಇದನ್ನೂ ಓದಿ: ಎಸಿ ರೈಲಿನ ಒಳಗಡೆಯೇ ಛತ್ರಿ ಹಿಡಿದು ಕುಳಿತ ಪ್ರಯಾಣಿಕರು
ಈ ಕುರಿತಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಶಾಲೆಗಳ ಹಂಚಿಕೆ, ಅನುಪಾಲನೆ, ಮುಂತಾದ ಸೂಕ್ತ ಕ್ರಮ ಕೈಗೊಳ್ಳುವುದು. ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ಧಿ) ಶೈಕ್ಷಣಿಕ ಮತ್ತು ಕಾರ್ಯಕ್ರಮವು ಸಮರ್ಪಕವಾಗಿ ನಡೆಯುತ್ತಿರುವ ಕುರಿತು ಅವಲೋಕನ ನಡೆಸಿ, ಕಾರ್ಯಕ್ರಮದ ಫಲಶ್ರುತಿಯ ಬಗ್ಗೆ ತ್ರೈಮಾಸಿಕ, ವಾರ್ಷಿಕವಾಗಿ ಒಂದು ವರದಿಯನ್ನು ಸಿದ್ಧಪಡಿಸಿ, ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಇವರ ಮೂಲಕ ಸರ್ಕಾರಕ್ಕೆ ಕಳುಹಿಸುವುದು.
ದತ್ತು ನೀಡುವಲ್ಲಿ ಹೆಚ್ಚು ದಾಖಲಾತಿ ಹೊಂದಿರುವ ಮತ್ತು ಗ್ರಾಮಾಂತರ ಪ್ರದೇಶದ ಶಾಲೆಗಳಿಗೆ ಆದ್ಯತೆ ನೀಡುವುದು. ಶಾಲೆಗಳು ಪುನರಾವರ್ತನೆಯಾಗದಂತೆ ಗಮನಿಸುವುದು ಅಧಿಕಾರಿಗಳ ಜವಾಬ್ದಾರಿ ಆಗಿರಲಿದೆ.