ಸರ್ಕಾರದಿಂದ ಕರ್ನಾಟಕ ಯುವ ನಿಧಿ ಯೋಜನೆ ಜಾರಿ- ಷರತ್ತುಗಳೇನು?

Public TV
1 Min Read
YUVA NIDHI

320 X 50

ಬೆಂಗಳೂರು: ನಿರುದ್ಯೋಗ ಭತ್ಯೆ ಪಾವತಿಸಲು “ಕರ್ನಾಟಕ ಯುವ ನಿಧಿ (Yuvanidhi) ಯೋಜನೆ” ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿ, ಮಾರ್ಗಸೂಚಿ ಪ್ರಕಟಿಸಿದೆ.

ರಾಜ್ಯದಲ್ಲಿ 2022-23 ರಲ್ಲಿ ತೇರ್ಗಡೆಯಾದ ಪದವೀಧರ, ನಿರುದ್ಯೋಗಿ (UnEmployers) ಗಳಿಗೆ ಪ್ರತಿ ತಿಂಗಳು 3,000 ರೂ.ಗಳು ಹಾಗೂ ಡಿಪ್ಲೋಮಾ (Diploma) ಹೊಂದಿದ ನಿರುದ್ಯೋಗಳಿಗೆ ಪ್ರತಿ ತಿಂಗಳು 1,500 ರೂ. ಗಳನ್ನು ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2003ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ, ನಿರುದ್ಯೋಗಿಗಳಿಗೆ ಈ ಯೋಜನೆ ಅನ್ವಯವಾಗಲಿದೆ. ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನಿರುದ್ಯೋಗ ಭತ್ಯೆಯ ಫಲಾನುಭವಿಗಳಾಗಿರುತ್ತಾರೆ. ಇದನ್ನೂ ಓದಿ: 5 ಗ್ಯಾರಂಟಿ ಘೋಷಣೆ – ಯಾವ ಯೋಜನೆಗೆ ಎಷ್ಟು ಹಣ ಬೇಕು?

ಪರತ್ತು ಮತ್ತು ನಿಬಂಧನೆಗಳು:
1. ಪದವಿ (Degree) / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
2. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ವಗತಗೊಳಿಸಲಾಗುವುದು.
3. ಭತ್ಯೆಯನ್ನು CBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
4. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು

ಯೋಜನೆಗೆ ಅರ್ಹರಾಗದೇ ಇರುವವರು ಯಾರು..?
1. ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರಿಸುವವರು.
2. ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.
3. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
4. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು. ಇದನ್ನೂ ಓದಿ: 180 ದಿನಗಳಾದರೂ ಕೆಲಸ ಸಿಗದ ನಿರುದ್ಯೋಗಿಗಳಿಗೆ ಯುವ ನಿಧಿ

Share This Article