ಬಿಬಿಎಂಪಿಯ ಡೆಡ್ಲಿ ಕಸದ ಲಾರಿಗಳಿಗೆ ಶೀಘ್ರವೇ ಸ್ಪೀಡ್ ಗವರ್ನರ್ ಅಳವಡಿಕೆ

Advertisements

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗಳಿಂದ ಅಪಘಾತ ಹಿನ್ನಲೆ ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೆಗೌಡ ಹೇಳಿದ್ದಾರೆ.

ಲಾರಿಗಳು 40 ಕಿಮೀ.ಗಿಂತ ವೇಗವಾಗಿ ಚಲಿಸದಂತೆ ವ್ಯವಸ್ಥೆಗೊಳಿಸಬೇಕು. ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆಲ್ಕೋ ಮೀಟರ್ ಮೂಲಕ ಚಾಲಕರ ತಪಾಸಣೆಗೆ ಸೂಚಿಸಲಾಗಿದೆ. ಈಗಾಗಲೇ ಬಿಬಿಎಂಪಿ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

Advertisements

ಈಗಾಗಲೇ ಸುಮಾರು ಚಾಲಕರಿಗೆ ಟ್ರಾಫಿಕ್ ಪೊಲೀಸರು ಹಂತ ಹಂತವಾಗಿ ತರಬೇತಿ ನೀಡುತ್ತಿದ್ದಾರೆ. ಪ್ರತಿ ಬಾರಿ 40 ಜನರಿಗೆ ತರಬೇತಿ ಕೊಟ್ಟು, ಒಂದು ರೀತಿ ಸಕಾರಾತ್ಮಕ ಬೆಳವಣಿಗೆ ಚಾಲಕರಲ್ಲಿ ಕಾಣಿಸುತ್ತಿದೆ. ಅಲ್ಲದೇ ಕಸದ ಲಾರಿಗಳ ಮೇಲೆ ಸಂಚಾರಿ ಪೊಲೀಸರು ಸ್ಪೆಷಲ್ ಡ್ರೈವ್ ಮಾಡಿದ್ದಾರೆ. ಈ ವೇಳೆ ಓರ್ವ ಚಾಲಕ ಮಾತ್ರ ಮದ್ಯಪಾನ ಮಾಡಿದ್ದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

ಯಾವ ರೀತಿ ವಾಹನ ಚಾಲನೆ ಮಾಡಬೇಕು. ಎಲ್ಲಿ ವಾಹನ ನಿಲ್ಲಿಸಬೇಕು. ರಸ್ತೆಯ ಎಡಬದಿಯಲ್ಲಿ ಮಾತ್ರ ಕಸದ ಲಾರಿ ಚಲಾಯಿಸಬೇಕು. ಸ್ಕೂಲ್ ಜೋನ್, ಆಕ್ಸಿಡೆಂಟ್ ಜೋನ್, ಹೀಗೆ ಎಲ್ಲಿ ಹೇಗೆ ವಾಹನ ಚಾಲನೆ ಮಾಡಬೇಕು ಎಂದು ಟ್ರೈನಿಂಗ್ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದಿನಿಂದ ಶಾಲೆ ಆರಂಭ – ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

Advertisements

ಇದೇ ವೇಳೆ ಮೊನ್ನೆ ನಡೆದ ಅಪಘಾತದಲ್ಲಿ ಲಾರಿ ಚಾಲಕನಿಗೆ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಅಧಿಕಾರಿಗಳಿಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

Advertisements
Exit mobile version