ರಾಮನಗರ: ರಾಮನಗರದಲ್ಲಿ (Ramanagara) ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಾರ್ಯಕರ್ತರು ಆಕರ್ಷಕ ಪಥಸಂಚಲನ ನಡೆಸಿದ್ದಾರೆ.
ನಗರದ ಆರ್ಎಸ್ಎಸ್ ಕಚೇರಿಯಿಂದ ಆರಂಭಗೊಂಡ ಪಥಸಂಚಲನವು ರಾಯರದೊಡ್ಡಿ ಸರ್ಕಲ್, ಕೆಂಪೇಗೌಡ ಸರ್ಕಲ್, ಮಾಗಡಿ ರಸ್ತೆ, ಐಜೂರು ಸರ್ಕಲ್, ಹಳೇ ಬಸ್ ನಿಲ್ದಾಣ ಹಾಗೂ ಎಂ.ಜಿ ರಸ್ತೆ ಮಾರ್ಗವಾಗಿ ಸಾಗಿ ಕೊನೆಯಲ್ಲಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮುಕ್ತಾಯಗೊಂಡಿತು. ಇದನ್ನೂ ಓದಿ: ಸ್ಟಿಂಗ್ನಲ್ಲಿದ್ದ ಮಹಿಳೆ ಪತ್ತೆ ಹಚ್ಚಿದ ಪೊಲೀಸರು

ಸಂಘದ ಸಾಂಪ್ರದಾಯಿಕ ಸಮವಸ್ತ್ರ ಧರಿಸಿದ್ದ ನೂರಾರು ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 3 ಕಿಲೋಮೀಟರ್ಗೂ ಹೆಚ್ಚು ದೂರ ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದರು. ರಸ್ತೆ ಬದಿ ನಿಂತು ಸಾರ್ವಜನಿಕರು ಪಥಸಂಚಲನ ಸ್ಥಳೀಯರು ವೀಕ್ಷಿಸಿದರು. ಆರ್ಎಸ್ಎಸ್ ಪಥಸಂಚಲನದ ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹಾಗೂ ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಇದನ್ನೂ ಓದಿ: ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೆ 10 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ: ಕಾಂಗ್ರೆಸ್
