ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೊಲೀಸರು ಶುಕ್ರವಾರ ರಾಂಬನ್ (Ramban) ಜಿಲ್ಲೆಯಲ್ಲಿ ಮಿನಿ ಬಸ್‌ನಲ್ಲಿ (Mini Bus) ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನವನ್ನು (IED) ವಶಪಡಿಸಿಕೊಂಡು, ಅದನ್ನು ನಿಷ್ಕ್ರಿಯಗೊಳಿಸಿರುವುದಾಗಿ ತಿಳಿಸಿದ್ದಾರೆ.
ಸುಮಾರು 20 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್‌ನಲ್ಲಿ ಅನುಮಾನಾಸ್ಪದ ವಸ್ತುವನ್ನು ಸಾಗಿಸುತ್ತಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ಬಳಿಕ ಮಿನಿ ಬಸ್ ಒಂದನ್ನು ತಪಾಸಣೆಗೆ ಒಳಪಡಿಸಲಾಯಿತು ಎಂದು ಎಸ್‌ಎಸ್‌ಪಿ ಮೋಹಿತಾ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಕಚೇರಿಯಿಂದ ಕಾಣೆಯಾಯ್ತಾ ಬಿಬಿಎಂಪಿ ಫೈಲ್? – ಸಾವಿರಾರು ಕೋಟಿ ರೂ. ವ್ಯವಹಾರದ ಕಡತ ನಾಪತ್ತೆ
Advertisement
Jammu | A suspicious object was found in a vehicle near Nashri Naka today. We had specific input on this. We continuously appeal to truck drivers, taxi drivers to understand the danger of sticky bombs as it is a real threat. Further probe underway: SSP Ramban, Mohita Sharma pic.twitter.com/AYQIgXM8cJ
— ANI (@ANI) November 25, 2022
Advertisement
ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಮೊದಲಿಗೆ ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಬಳಿಕ ಬಸ್ ಅನ್ನು ಸಂಪೂರ್ಣವಾಗಿ ಶೋಧಿಸಲಾಯಿತು. ಹುಡುಕಾಟದ ವೇಳೆ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ ಐಇಡಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಬಣ ಸಂಘರ್ಷ – ಡಿಕೆಶಿ ನಡೆಗೆ ಸಿದ್ದರಾಮಯ್ಯ ಕೊತಕೊತ!
Advertisement
ಐಇಡಿ ಪತ್ತೆಯಾಗುತ್ತಲೇ ಸಿಆರ್‌ಪಿಎಫ್ ಮತ್ತು ಸೇನೆಯ ತಂಡ ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಈ ಮೂಲಕ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.