– ಈ ಬಗ್ಗೆ ಪಾಕ್ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ತೇವೆ
ಇಸ್ಲಾಮಾಬಾದ್: ಭಾರತೀಯ ಕಮಾಂಡರ್ ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಜೆ ನೀಡಿರುವ ತೀರ್ಪಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮೂಲಕ ಶ್ಲಾಘಿಸಿದ್ದಾರೆ.
Advertisement
ಕುಲಭೂಷಣ್ ಜಾಧವ್ ಪ್ರಕರಣದ ವಿಚಾರವಾಗಿ ಬುಧವಾರ ಐಸಿಜೆ ಕೋರ್ಟ್ ಪಾಕ್ ನೀಡಿರುವ ಗಲ್ಲು ಶಿಕ್ಷೆಗೆ ತಡೆ ನೀಡಿ ರಾಜತಾಂತ್ರಿಕ ನೆರವು ನೀಡಬೇಕೆಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಈಗ ಇಮ್ರಾನ್ ಖಾನ್ ಟ್ವೀಟ್ ಮಾಡಿ, ಕಮಾಂಡರ್ ಕುಲಭೂಷಣ್ ಜಾಧವ್ ಅವರನ್ನು ಖುಲಾಸೆಗೊಳಿಸಿ, ಬಿಡುಗಡೆ ಮಾಡದಿರುವ ಐಸಿಜೆ ನಿರ್ಧಾರವನ್ನು ಶ್ಲಾಘಿಸುತ್ತೇನೆ. ಆದರೆ ಪಾಕಿಸ್ತಾನದ ಜನರ ವಿರುದ್ಧ ಮಾಡಿರುವ ಅಪರಾಧಗಳಲ್ಲಿ ಅವರು ತಪ್ಪಿತ್ತಸ್ಥರಾಗಿದ್ದಾರೆ. ಪಾಕಿಸ್ತಾನವು ಕಾನೂನಿನ ಪ್ರಕಾರ ತನ್ನ ಕ್ರಮವನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
Advertisement
Appreciate ICJ’s decision not to acquit, release & return Commander Kulbhushan Jadhav to India. He is guilty of crimes against the people of Pakistan. Pakistan shall proceed further as per law.
— Imran Khan (@ImranKhanPTI) July 18, 2019
Advertisement
ಏನಿದು ಪ್ರಕರಣ?
ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2017ರ ಏಪ್ರಿಲ್ ನಲ್ಲಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.
Advertisement
ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಜಾಧವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು. ಅಲ್ಲದೆ 2017ರಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು.
ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ಹೀಗಾಗಿ ಭಾರತ ಮೇ 2017ರಂದು ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡ 10 ಸದಸ್ಯರುಳ್ಳ ನ್ಯಾಯಪೀಠ 18 ಮೇ 2017ರಂದು ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.
ಭಾರತ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದು, ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್ ನಲ್ಲಿ ಭಾರತ ಮಂಡಿಸಿತ್ತು.