ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರನ್ನು ಮಂಗಳವಾರ ಪ್ಯಾರಾ ಮಿಲಿಟರಿ ಪಡೆ ಬಂಧಿಸಿದ್ದು, ಇದರಿಂದ ಸಿಡಿದೆದ್ದಿರುವ ಅವರ ಬೆಂಬಲಿಗರು ಭಾರೀ ಪ್ರತಿಭಟನೆಯಲ್ಲಿ (Protest) ತೊಡಗಿದ್ದಾರೆ.
ಮಂಗಳವಾರ ಪ್ರಕರಣವೊಂದರ ವಿಚಾರಣೆಗಾಗಿ ಇಸ್ಲಾಮಾಬಾದ್‌ನ ಹೈಕೋರ್ಟ್ ತೆರಳುತ್ತಿದ್ದ ವೇಳೆಯೇ ಇಮ್ರಾನ್‌ಖಾನ್ ಅವರನ್ನು ಬಂಧಿಸಲಾಗಿತ್ತು. ಇಮ್ರಾನ್ ಖಾನ್ ಬಂಧನವನ್ನು ವಿರೋಧಿಸಿ ಬಳಿಕ ಅವರ ಬೆಂಬಲಿಗರು ಲಾಹೋರ್‌ನಲ್ಲಿರುವ ಸೇನಾ ಕಮಾಂಡರ್‌ಗಳ ನಿವಾಸದ ಆವರಣವನ್ನು ಪ್ರವೇಶಿಸಿ ದಾಂಧಲೆ ನಡೆಸಿದ್ದಾರೆ. ಪೇಶಾವರದಲ್ಲಿ ಪಾಕಿಸ್ತಾನದ ರೇಡಿಯೋ ಕಟ್ಟಡಕ್ಕೂ ಬೆಂಕಿ ಹಚ್ಚಲಾಗಿದೆ.
Advertisement
Advertisement
ಖಾನ್ ಬಂಧನದ ಬಳಿಕ ಪಾಕಿಸ್ತಾನದಾದ್ಯಂತ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಫ್ (PTI) ಬೆಂಬಲಿಗರಿಂದ ಪ್ರತಿಭಟನೆ ಭುಗಿಲೆದ್ದಿದೆ. ಇಸ್ಲಾಮಾಬಾದ್‌ನಾದ್ಯಂತ ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಸೆಕ್ಷನ್ 144 ಜಾರಿಯಲ್ಲಿದ್ದು, ಉಲ್ಲಂಘನೆಯಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಇಸ್ಲಾಮಾಬಾದ್ ಮಾತ್ರವಲ್ಲದೇ ರಾವಲ್ಪಿಂಡಿ, ಲಾಹೋರ್, ಕರಾಚಿ, ಗುಜ್ರಾನ್‌ವಾಲಾ, ಫೈಸಲಾಬಾದ್, ಮುಲ್ತಾನ್, ಪೇಶಾವರ್ ಮತ್ತು ಮರ್ದಾನ್‌ನಲ್ಲಿಯೂ ಪ್ರತಿಭಟನೆಗಳು ಪ್ರಾರಂಭವಾಗಿರುವುದಾಗಿ ವರದಿಗಳು ತಿಳಿಸಿವೆ.
Advertisement
ರಾವಲ್ಪಿಂಡಿಯಲ್ಲಿ ಸೇನಾ ಪ್ರಧಾನ ಕಚೇರಿಯ ಮುಖ್ಯ ಗೇಟ್ ಅನ್ನು ಪ್ರತಿಭಟನಾಕಾರರು ಒಡೆದು ಹಾಕಿದ್ದಾರೆ. ಲಾಹೋರ್‌ನಲ್ಲಿ ಕಾರ್ಪ್ಸ್ ಕಮಾಂಡರ್ ಅವರ ನಿವಾಸಕ್ಕೆ ನುಗ್ಗಿ ಗೇಟ್ ಹಾಗೂ ಕಿಟಕಿಗಳನ್ನು ಒಡೆದಿದ್ದಾರೆ. ಹಲವೆಡೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅರೆಸ್ಟ್
ಇಮ್ರಾನ್ ಖಾನ್ ಬಂಧನದ ಬಳಿಕ ಪಾಕಿಸ್ತಾನದ ದೂರಸಂಪರ್ಕ ಪ್ರಾಧಿಕಾರ ದೇಶಾದ್ಯಂತ ಮೊಬೈಲ್ ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಮಾತ್ರವಲ್ಲದೇ ಟ್ವಿಟ್ಟರ್, ಫೇಸ್‌ಬುಕ್ ಹಾಗೂ ಯೂಟ್ಯೂಬ್‌ಗೂ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates