ನನ್ನನ್ನು ಕೋರ್ಟ್‌ನಲ್ಲೂ ಕೊಲ್ಬೋದು – ಪಾಕ್ ನ್ಯಾಯಮೂರ್ತಿಗೆ ಪತ್ರ ಬರೆದ ಇಮ್ರಾನ್ ಖಾನ್

Public TV
1 Min Read
Imran Khan

ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರು 100ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದು, ಈ ಹಿನ್ನೆಲೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವ ವೇಳೆಯೂ ತಮ್ಮನ್ನು ಯಾರಾದರೂ ಕೊಲ್ಲಬಹುದು ಎಂದು ಹೇಳಿಕೊಂಡಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಯನ್ನು ನಡೆಸಲು ಅವಕಾಶ ನೀಡುವಂತೆ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದಾರೆ.

ಪಾಕಿಸ್ತಾನ ತೆಹ್ರಿಕ್-ಇ-ಇನ್ಸಾಫ್ (PTI) ಅಧ್ಯಕ್ಷ ತೋಷಾಖಾನ ಪ್ರಕರಣದಲ್ಲಿ ಶನಿವಾರ ವಿಚಾರಣೆಗಾಗಿ ಫೆಡರಲ್ ನ್ಯಾಯಾಂಗ ಸಂಕೀರ್ಣಕ್ಕೆ (FJC) ತೆರಳಿದ್ದರು. ಈ ವೇಳೆ ಅಲ್ಲಿ ತಮ್ಮನ್ನು ಕೊಲ್ಲಲು ದೊಡ್ಡ ಸಂಚು ರೂಪಿಸಲಾಗಿತ್ತು ಎಂದು ಸೋಮವಾರ ಆರೋಪಿಸಿದ್ದಾರೆ.

imran khan

ಎಫ್‌ಜೆಸಿ ಹೊರಗಡೆ ತನ್ನನ್ನು ಕೊಲ್ಲಲು ಸುಮಾರು 20 ಜನ ಅಪರಿಚಿತ ವ್ಯಕ್ತಿಗಳು ಕಾದು ಕುಳಿತಿದ್ದರು ಎಂದು ಇಮ್ರಾನ್ ಖಾನ್ ತಿಳಿಸಿದ್ದು, ಈ ಬಗ್ಗೆ ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಉಮರ್ ಅಟ್ಟಾ ಬಂಡಿಯಲ್ ಅವರಿಗೆ ಪತ್ರ ಬರೆದಿದ್ದಾರೆ. ವರ್ಚುವಲ್ ಆಗಿ ವಿಚಾರಣೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಹಾಗೂ ತಮ್ಮ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಒಟ್ಟುಗೂಡಿಸುವಂತೆ ಕೋರಿಕೊಂಡಿದ್ದಾರೆ. ಇದನ್ನೂ ಓದಿ:  92ನೇ ವಯಸ್ಸಿನಲ್ಲಿ 5ನೇ ಮದುವೆ – ಇದು ಕೊನೆಯದ್ದು ಎಂದ ಮುರ್ಡೋಕ್‌

IMRAN KHAN

ಇಮ್ರಾನ್ ಖಾನ್ ಅವರು ತೋಷಾಖಾನ ಎಂಬ ರಾಜ್ಯದ ಖಜಾನೆಯಿಂದ ರಿಯಾಯಿತಿ ದರದಲ್ಲಿ ಉಡುಗೊರೆಯಾಗಿ ಬಂದ ವಸ್ತುಗಳನ್ನು ಪಡೆದುಕೊಂಡಿದ್ದಾರೆ. ಅವುಗಳಲ್ಲಿ ದುಬಾರಿ ಕೈಗಡಿಯಾರಗಳೂ ಸೇರಿವೆ. ಅವುಗಳನ್ನು ಲಾಭಕ್ಕಾಗಿ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಬಹಿರಂಗಪಡಿಸದೇ ಹೋಗಿದ್ದಕ್ಕೆ ಪಾಕಿಸ್ತಾನದ ಚುನಾವಣಾ ಆಯೋಗ ಅವರನ್ನು ಅನರ್ಹಗೊಳಿಸಿತ್ತು. ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಅವರನ್ನು ಶಿಕ್ಷಿಸಲು ದೂರುಗಳನ್ನೂ ದಾಖಲಿಸಲಾಗಿತ್ತು. ಇದನ್ನೂ ಓದಿ: ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಔಟ್‌- ಇನ್ನು ಮುಂದೆ ವಿಶ್ವದೆಲ್ಲೆಡೆ ವಂಚಕ ಮೆಹುಲ್‌ ಚೋಕ್ಸಿ ಸಂಚರಿಸಬಹುದು

Share This Article