ಮುಂಬೈ: ಭಾರತ ತೊರೆಯುವಂತೆ ನೀಡಿದ್ದ ನೋಟಿಸ್ ಪ್ರಶ್ನಿಸಿ ನಟ ಇಮ್ರಾನ್ ಖಾನ್ (Imran Khan) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ (Bombe High Court) ಮುಂದೂಡಿದೆ.
ಬಾಂಬೆ ಹೈಕೋರ್ಟ್ `ಭಾರತ ತೊರೆಯುವ ನೋಟಿಸ್’ ಪ್ರಶ್ನಿಸಿ ನಟ ಇಮ್ರಾನ್ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮುಂದೂಡಿ, ನವೆಂಬರ್ 2ರವರೆಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಮುಂದಿನ ವಿಚಾರಣೆಯು ನ.2ರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಇದನ್ನೂ ಓದಿ: ಧನ್ವೀರ್ಗೆ ವಾರ್ನಿಂಗ್ ಕೊಡೋಕೆ ದರ್ಶನ್ ಅಣ್ಣ ಹೇಳಿದ್ರು: ಝೈದ್ ಖಾನ್
ಇಮ್ರಾನ್ ಖಾನ್ ಭಾರತೀಯ ಪ್ರಜೆಯಲ್ಲದಿದ್ದರೂ ಸಹ ಭಾರತದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂಬ ಕಾರಣಕ್ಕಾಗಿ ವಲಸೆ ಕಾಯ್ದೆಯಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಮುಂಬೈ ಪೊಲೀಸರು ನೋಟಿಸ್ ನೀಡಿದ್ದು, ಅ.28ರೊಳಗೆ ಭಾರತ ದೇಶವನ್ನು ತೊರೆಯುವಂತೆ ಸೂಚನೆ ನೀಡಿದ್ದರು.
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಗೆ ಕರೆ ನೀಡಿತ್ತು. ಈ ಪ್ರತಿಭಟನೆಯಲ್ಲಿ ನಟ ಇಮ್ರಾನ್ ಖಾನ್ ಪಾಲ್ಗೊಂಡಿದ್ದರು. ಇದರ ಬೆನ್ನಲ್ಲೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ವಶಕ್ಕೆ ಪಡೆದಿದ್ದ ಫೋಟೋವೊಂದನ್ನು ಇಮ್ರಾನ್ ಖಾನ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಕಾರವಾರ | ಉಸಿರುಗಟ್ಟಿ ಬೋಟ್ನಲ್ಲಿ ಮೂವರು ಮೀನುಗಾರರು ದುರ್ಮರಣ
