ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಪಾಕ್ ಸುಪ್ರೀಂಕೋರ್ಟ್‍ನಲ್ಲಿ ಪ್ರಧಾನಿ ಇಮ್ರಾನ್ ಖಾನ್‍ಗೆ ಹಿನ್ನಡೆ ಆಗಿದೆ. ಚುನಾವಣೆ ಅತ್ಯಗತ್ಯ, ಆದ್ರೇ ಅದು ಅವಿಶ್ವಾಸ ನಿಲುವಳಿ ಮೇಲಿನ ಮತದಾನದಿಂದ ನಿರ್ಧಾರವಾಗಲಿ ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
Advertisement
ಈ ಬೆನ್ನಲ್ಲೇ ಪಾಕಿಸ್ತಾನ ಸುಪ್ರೀಂಕೋರ್ಟ್‍ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಹೆಸರನ್ನು ಹಂಗಾಮಿ ಪ್ರಧಾನಿ ಹುದ್ದೆಗೆ ಇಮ್ರಾನ್ ಖಾನ್ ಪ್ರಸ್ತಾಪಿಸಿದ್ದಾರೆ. ಹೊಸ ಹಂಗಾಮಿ ಪ್ರಧಾನಿ ಅಧಿಕಾರ ಸ್ವೀಕರಿಸುವವರೆಗೂ ಇಮ್ರಾನ್ ಖಾನ್ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಈ ಮಧ್ಯೆ, ಪಾಕ್ ರಾಜಕೀಯದಲ್ಲಿ ವಿದೇಶಿ ಹಸ್ತಕ್ಷೇಪವಿಲ್ಲ. ಯಾವ ದೇಶವೂ ನಮ್ಮ ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿಲ್ಲ ಅಂತ ಗುಪ್ತಚರ ಪಡೆ ಸ್ಪಷ್ಟಪಡಿಸಿದೆ. ಅಮೆರಿಕ ಕೂಡ ಇಮ್ರಾನ್ ಆರೋಪ ನಿರಾಕರಿಸಿದೆ. ಈ ನಡುವೆ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೋಯಿದ್ ಯುಸೂಫ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಹೈಡ್ರಾಮಾ – ಸದ್ಯಕ್ಕೆ ಇಮ್ರಾನ್ ಪಾರು, 90 ದಿನದಲ್ಲಿ ಚುನಾವಣೆ
Advertisement
Advertisement
ಪಾಕಿಸ್ತಾನದ ಸಂವಿಧಾನದ ಆರ್ಟಿಕಲ್ 224-ಂ(1)ರ ಪ್ರಕಾರ ವಿಸರ್ಜನೆಗೊಂಡಿರುವ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮತ್ತು ವಿರೋಧ ಪಕ್ಷದ ನಾಯಕರೊಂದಿಗೆ ಸಮಾಲೋಚಿಸಿ ಹಂಗಾಮಿ ಪ್ರಧಾನಿಯನ್ನು ಅಧ್ಯಕ್ಷರು ನೇಮಕ ಮಾಡುತ್ತಾರೆ. ಆದರೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಿಪಕ್ಷ ನಾಯಕ ಶೆಹಬಾಜ್ ಷರೀಫ್ ನಿರಾಕರಿಸಿದಾರೆ. ಇದು ಕಾನೂನುಬಾಹಿರ ರಾಷ್ಟ್ರಪತಿ ಮತ್ತು ಪ್ರಧಾನಿ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ಎಲ್ಲದರ ನಡುವೆ ನಾಳೆಯೂ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಪಾಕ್ ಪ್ರಧಾನಿ ಇಮ್ರಾನ್‌ಖಾನ್‌ನನ್ನು ಮಿನಿ ಟ್ರಂಪ್ ಎಂದ ಮಾಜಿ ಪತ್ನಿ
Advertisement